Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅರಮನೆ ಮೈದಾನದಲ್ಲಿ ಕುಂದಾಪ್ರ ಕನ್ನಡ ಹಬ್ಬ. ಆಗಸ್ಟ್ 17-18ರಂದು ಆಯೋಜನೆ
    ಊರ್ಮನೆ ಸಮಾಚಾರ

    ಅರಮನೆ ಮೈದಾನದಲ್ಲಿ ಕುಂದಾಪ್ರ ಕನ್ನಡ ಹಬ್ಬ. ಆಗಸ್ಟ್ 17-18ರಂದು ಆಯೋಜನೆ

    Updated:08/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಕುಂದಗನ್ನಡಿಗರು ಭಾಷೆ – ಬದುಕಿನ ಮೇಲಿನ ಅಭಿಮಾನದಿಂದ ಆಚರಿಸಲಾಗುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನವನ್ನು, ಈ ಭಾರಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ರಾಜಧಾನಿಯಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ.

    Click Here

    Call us

    Click Here

    ‘ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು’ ಆಯೋಜಿಸಲಾಗುತ್ತಿರುವ ಕುಂದಾಪ್ರ ಕನ್ನಡ ಹಬ್ಬದ ದಿನ-ಸ್ಥಳ ಘೋಷಣಾ ʼವಾಲ್ಗʼ ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡ ಹಬ್ಬದ ವಿವರಗಳನ್ನು ನೀಡಲಾಯಿತು. ಆರು ವರ್ಷಗಳ ಹಿಂದೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಆರಂಭವಾಗಿದ್ದು, ‘ಕುಂದಾಪ್ರ ಕನ್ನಡ ಪ್ರತಿಷ್ಠಾನವು ಐದನೇ ವಿಶ್ವ ಕುಂದಾಪುರ ಕನ್ನಡ ಹಬ್ಬವನ್ನು ಆಚರಿಸುತ್ತಿದೆ.

    ಥೀಮ್ ಸಾಂಗ್ ಪೋಸ್ಟರ್ ಅನಾವರಣ:
    ಕುಂದಾಪ್ರ ಕನ್ನಡ ಹಬ್ಬಕ್ಕೆ ಪೂರ್ವಭಾವಿಯಾಗಿ ಇಂದು ಥೀಮ್ ಸಾಂಗ್ ಮತ್ತು ಪೋಸ್ಟರ್ ಅನಾವರಣ ಕಾರ್ಯಕ್ರಮ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದ ಸುದೀಕ್ಷಾ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು.

    ಉದ್ಘಾಟಕರಾದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತಾಡಿ, ಕುಂದಾಪ್ರ ಕನ್ನಡ ಹಬ್ಬದಲ್ಲಿ ಹಲವುರು ಶ್ರಮಿಸುತ್ತಿದ್ದಾರೆ. ಸದಾ ಈ ಪ್ರಯತ್ನಕ್ಕೆ ನನ್ನ ಬೆಂಬಲ ಇರಲಿದೆ. ಕುಂದಾಪುರ ಸಂಸ್ಕ್ರತಿಗೆ ಸಂಬಂಧಿಸಿದ ಹೊಸ ಪ್ರಯೋಗ ಮಾಡುತ್ತಿದ್ದು, ಕುಂದಾಪುರ ಹಬ್ಬದಲ್ಲಿ ಅದನ್ನ ರಿವೀಲ್ ಮಾಡೋದಾಗಿ ಹೇಳಿದರು.

    ಕಾರ್ಯಕ್ರಮದಲ್ಲಿ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಸತೀಶ್ ಶೆಟ್ಟಿ, ಉಪೇಂದ್ರ ಶೆಟ್ಟಿ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ದೀಪಕ್ ಶೆಟ್ಟಿ, ರಾಘವೇಂದ್ರ ಕಾಂಚನ್, ನರಸಿಂಹ ಬೀಜಾಡಿ, ಅಜಿತ್ ಶೆಟ್ಟಿ ಉಳ್ತೂರು, ಉದಯ್ ಹೆಗ್ಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.

    Click here

    Click here

    Click here

    Click Here

    Call us

    Call us

    ಬೃಹತ್ ಮೆರವಣಿಗೆ: ಎರಡು ದಿನಗಳ ಈ ಕಾರ್ಯಕ್ರಮ ‘ದಿಬ್ಣ’ದೊಂದಿಗೆ ಆರಂಭವಾಗಲಿದೆ. ಅದರಲ್ಲಿ ಬೆಂಗಳೂರಿನ ಕನಿಷ್ಠ 10 ಕಡೆಗಳಿಂದ ಜನರು ಮೆರವಣಿಗೆ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲಿದ್ದಾರೆ. ‘ನಾಕ್ ಘನಾ ಸುರ್ಲ್’ ಎಂಬ ಕರಾವಳಿಯ ಅದ್ಭುತ ಗೀತೆಗಳ ಗಾಯನವಿರಲಿದೆ. ನಂತರ ‘ನುಡಿ ಚಾವಡಿ’ ಎಂಬ ಕಾರ್ಯಕ್ರಮದ ಮೂಲಕ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.17ರ ರಾತ್ರಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ‘ಜೋಡಾಟ’ ನಡೆಯಲಿದೆ. ರಾಜ್ಯದ ಯಕ್ಷರಂಗದ ಮೇರು ಕಲಾವಿದರು ಭಾಗವಹಿಸಲಿರುವ ಈ ಯಕ್ಷಗಾನಕ್ಕೇ 15-20 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ದೀಪಕ್ ಶೆಟ್ಟಿ ವಿವರಿಸಿದರು. ಮಾತ್ರವಲ್ಲದೆ, ಕನ್ನಡ ಚಿತ್ರರಂಗದ ಸ್ಟಾರ್ ನಟ-ನಿರ್ದೇಶಕರು ಸೇರಿದಂತೆ ಹಲವು ತಾರೆಯರು ಕೂಡ ಭಾಗಿ ಆಗಲಿರುವುದರಿಂದ ಈ ಸಂಭ್ರಮಕ್ಕೆ ತಾರಾ ಕಳೆ ಇರಲಿದೆ.

    ಕುಂದಾಪ್ರ ಕನ್ನಡ ಹಬ್ಬದ ವಿಶೇಷತೆಗಳು
    ಬೆಂಗಳೂರಿನ ಹಲವು ಏರಿಯಾಗಳಿಂದ ಪುರವಣಿಗೆಯೊಂದಿಗೆ ದಿಬ್ಬಣವು ಅರಮನೆ ಮೈದಾನಕ್ಕೆ ಬರಲಿದೆ.ಬಳಿಕ ನುಡಿ ಚಾವುಡಿಯ ಮೂಲಕ ಅಗಸ್ಟ್ 17ರ ಶನಿವಾರ ಮಧ್ಯಾನ್ನ ಉದ್ಘಾಟನಾ ಕಾರ್ಯಕ್ರಮ ಇರಲಿದ್ದು ಚಿತ್ರ ತಾರೆಯರು, ಗಣ್ಯರು ಉಪಸ್ಥಿತರಿರಲಿದ್ದಾರೆ. ಕುಂದಾಪುರ ಕನ್ನಡ ಹಬ್ಬದಲ್ಲಿ ಬೆಂಗಳೂರಿನಲ್ಲಿ ಅತಿದೊಡ್ಡ ಐತಿಹಾಸಿಕ ಜೋಡಾಟ ಯಕ್ಷಗಾನ, ಹಂದಾಡಿ ಮತ್ತು ತಂಡದ ಹಂದಾಡ್ತಾ ನೆಗ್ಯಾಡಿಯ ವಿಭಿನ್ನ ನಗೆನಾಟಕ, ಕುಂದಾಪುರದ ಗ್ರಾಮೀಣ ಕ್ರೀಡೆಗಳನ್ನ ಒಳಗೊಂಡ ಬಯಲಾಟ ರಥೋತ್ಸವ, ಆಫ್ರಿಕಾದ ಜಂಬೆ- ಕುಂದಾಪುರದ ಚಂಡೆಯ ಜುಗಲ್ಬಂದಿ ಕಾರ್ಯಕ್ರಮದಲ್ಲಿ ಆಫ್ರಿಕಾ- ಕುಂದಾಪುರ ಕಲಾ ಸಮಾಗಮ, ಭುಭಬಲದ ಪರಾಕ್ರಮ ಎಂಬ ಹಗ್ಗ ಜಗ್ಗಾಟ ಸ್ಪರ್ಧೆ,ಯುವಕ-ಯುವತಿಯರಿಗಾಗಿ ಕುಂದಾಪುರ ಕನ್ನಡ ಡಿಜೆ,ಕುಂದಗೀತೆಗಳ ಡಾನ್ಸ್ ಕುಂದಾಪುರ ಡಾನ್ಸ್, ಕುಂದಾಪುರ ಕನ್ನಡ ಚಿತ್ರ ಪ್ರದರ್ಶನ,ಕುಂದಾಪುರ ನೆಲಮೂಲದ ಸಿನಿ ತಾರಾ ಮೆರಗು,ಕಡಲೂರಿನ ವಸ್ತು,ಒಡವೆ, ವಸ್ತ್ರ ಮೊದಲಾದವುಗಳ ಪ್ರದರ್ಶನ, ಮಾರಾಟ, ಕರಾವಳಿ ಖಾದ್ಯ ಮೇಳ ಸೇರಿ ಈ ಭಾರಿ ವೈವಿಧ್ಯಮಯ ಕಾರ್ಯಕ್ರಮಗಳು ಇರಲಿದೆ.

    2 ದಿನಗಳ ಕಾರ್ಯಕ್ರಮ

    • ‘ಹಂದಾಡ್ತ ನೆಗ್ಯಾಡಿ’: ಕುಂದಾಪ್ರ ಕನ್ನಡದ ನಗೆ ರಾಯಭಾರಿ ಮನು ಹಂದಾಡಿ ಅವರಿಂದ ನಗೆ ಪ್ರಹಸನ.
    • ‘ಬಯಲಾಟ’: ಗ್ರಾಮೀಣ ಕ್ರೀಡೋತ್ಸವ
    • ‘ರಥೋತ್ಸವ’: ಹಬ್ಬದ ರೀತಿಯಲ್ಲೇ ಭಾವಬೀದಿಯಲ್ಲಿ ಭಾಷೆಯ ತೇರು.
    • ‘ಪೆಟ್ಟ್ ಒಂದೇ, ಸ್ವರ ಬೇರೆ’: ಆಫ್ರಿಕದ ಜಂಬೆ, ಕುಂದಾಪುರದ ಚೆಂಡೆ ಜುಗಲ್ ಬಂದಿ.
    • ‘ಭುಜಬಲದ ಪರಾಕ್ರಮ’ ಹಗ್ಗಜಗ್ಗಾಟ 8 ಊರಿನ ಹೆಸರಲ್ಲಿ ತಂಡ.
    • ‘ಯಬ್ಯಾ ಸೌಂಡೇ’: ರವಿ ಬಸ್ರೂರು ಅವರ ಶತಕುಂದ ಪದ್ಯಗಳ ಡಿಜೆ
    • ‘ಡ್ಯಾನ್ಸ್ ಕುಂದಾಪ್ರ ಡ್ಯಾನ್ಸ್’: ವಿಶೇಷ ನೃತ್ಯ ಪ್ರದರ್ಶನ
    • ‘ಗಂಡಿನ್ ಪಿಚ್ಚರ್ ಬಿಡ್ತ್’: ವಿಶೇಷ ಕಿರುಚಿತ್ರ ಪ್ರದರ್ಶನ
    • ‘ನಮ್ ಊರ್ಮನಿ ಪಿಚ್ಚರ್ ಯಾಕ್ಟ್ರ್ಸ್’: ಊರಿನ ಸಿನಿತಾರೆಯರು, ಸೂಪರ್ ಸ್ಟಾರ್ಗಳ ಸಮಾಗಮ.
    • ‘ಕುಂದಾಪ್ರ ಸಂತಿ’: ಕುಂದಾಪುರದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಸಂತೆ.
    • ‘ಹೊಟ್ಟಿ ಕಂಡದ್ ನಾವೇ ಸೈ’: ಕರಾವಳಿಯ ವಿಶೇಷ ಖಾದ್ಯ ಮೇಳ.

    * ಕಳೆದ ನಾಲ್ಕು ಕುಂದಾಪ್ರ ಕನ್ನಡ ಹಬ್ಬಗಳು ವಿಜಯನಗರದ ಬಂಟರ ಸಂಘದಲ್ಲಿ ಆಗಿದ್ದವು. ಆದರೆ ಅದಕ್ಕೆ ಬೃಹತ್ ಜನಸ್ತೋಮ ಹರಿದುಬಂದಿದ್ದು ಸುಮಾರು ಶೇ. 70 ಜನರಿಗೆ ಬಂಟರ ಸಂಘಕ್ಕೆ ಪ್ರವೇಶಿಸಲಿಕ್ಕೂ ಆಗಿರಲಿಲ್ಲ. ಹೀಗಾಗಿ ಈ ವರ್ಷ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ, ಈ ಬಾರಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಜನರು ಸೇರಲಿದ್ದಾರೆ. – ದೀಪಕ್ ಶೆಟ್ಟಿ ಬಾರ್ಕೂರು, ಅಧ್ಯಕ್ಷರು, ಕುಂದಾಪ್ರ ಕನ್ನಡ ಪ್ರತಿಷ್ಠಾನ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    10 + fifteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.