ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ ಮತ್ತು ಸಂಕಲ್ಪ ನಿಧಿ ಹುಂಡಿ ವಿತರಣೆ ಕಾರ್ಯಕ್ರಮವು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಾಗಪಾತ್ರಿಗಳಾದ ರವಿರಾಜ್ ಭಟ್ ಅಂಪಾರು, ಕಲಿಯುಗದಲ್ಲಿ ನಾಗ ದೇವರ ಆರಾಧನೆ ಶ್ರೇಷ್ಠವಾದುದು. ಕಳೆದ ೨೪ ವರ್ಷಗಳಿಂದ ನಿರಂತರವಾಗಿ ನಾಗಮಂಡಲೋತ್ಸವ ಪೂಜೆಯನ್ನು ನಡೆಸಿ ದೇವರ ಅನುಗ್ರಹಕ್ಕೆ ಪಾತ್ರರಾಗಿರುವ ಚಾರೋಡಿ ಮೇಸ್ತ ಸಮಾಜ ಬಾಂಧವರು, ಬೆಣ್ಗೆರೆಯಲ್ಲಿ ಸುಂದರ ನಾಗ ದೇವಸ್ಥಾನವನ್ನು ನಿರ್ಮಿಸಿ ನಾಗನ ಆರಾಧನೆಯನ್ನು ಮಾಡಿಕೊಂಡು ಬಂದಿರುವುದು ವಿಶಿಷ್ಟವಾದುದು. ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಕಾರ್ಯಕ್ರಮಗಳು ದೇವರ ಅನುಗ್ರಹದಿಂದ ಉತ್ತಮವಾಗಿ ನೆರವೇರಲಿ ಎಂದು ಹೇಳಿದರು.
ಶ್ರೀ ನಾಗ ದೇವಸ್ಥಾನದ ಅಧ್ಯಕ್ಷತೆಯನ್ನು ಉಮೇಶ ಎಲ್. ಮೇಸ್ತ ಅವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿದ್ದ ಪುರೋಹಿತರಾದ ರಾಘವೇಂದ್ರ ಅಡಿಗ ನಾಯಕವಾಡಿ ಶುಭಾಶಂಸನೆಗೈದರು. ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜ ಅಧ್ಯಕ್ಷ ರಾಮಚಂದ್ರ ಬಿ. ಶಿರೂರ್‌ಕರ್ ಸಂಕಲ್ಪ ನಿಧಿ ಹುಂಡಿಯನ್ನು ವಿತರಿಸಿದರು. ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜ ಗೌರವಾಧ್ಯಕ್ಷ ಕೃಷ್ಣಮೂರ್ತಿ ವಾಮನ ಆಚಾರ್, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ಮೇಸ್ತ, ಗೌರವಾಧ್ಯಕ್ಷ ಮಡಿಕಲ್ ಸುರೇಶ ಖಾರ್ವಿ, ಉಪಾಧ್ಯಕ್ಷ ವಿನೋದ ಕುಮಾರ್ ಗುಜ್ಜಾಡಿ, ಮಂಗಳೂರು ಶ್ರೀ ಸೋಮನಾಥ ದೇವಸ್ಥಾನದ ಅಧ್ಯಕ್ಷ ಮಧುಕರ್ ನಾಯಕ್, ಕುಂದಾಪುರ ಮದ್ದುಗುಡ್ಡೆ ಶ್ರೀ ನಾಗಜಟ್ಟಿಗೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀಧರ ಮೇಸ್ತ, ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಅಧ್ಯಕ್ಷ ಶಂಕರ ಖಾರ್ವಿ, ಕಂಚುಗೋಡು ಶ್ರೀ ರಾಮ ಮಂದಿರದ ಅಧ್ಯಕ್ಷ ನಾಗೇಶ ಖಾರ್ವಿ, ಬೆಣ್ಗೆರೆ ಶ್ರೀ ಸುಬ್ರಹ್ಮಣ್ಯೇಶ್ವರ ಯೂತ್ ಕ್ಲಬ್ ಅಧ್ಯಕ್ಷ ವಿಶ್ವನಾಥ ಮೇಸ್ತ, ನಾಗಶ್ರೀ ಮಹಿಳಾ ಮಂಡಳಿ ಅಧ್ಯಕ್ಷೆ ಕುಸುಮಾ ಮೇಸ್ತ ಮೊದಲಾದವರು ಉಪಸ್ಥಿತರಿದ್ದರು.
ದೇವಸ್ಥಾನದ ಅಧ್ಯಕ್ಷ ಉಮೇಶ ಎಲ್. ಮೇಸ್ತ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ದೇವಸ್ಥಾನದ ಕಾರ್ಯದರ್ಶಿ ಶ್ರೀಧರ ಮೇಸ್ತ ವಂದಿಸಿದರು.