ಕೋಟೇಶ್ವರ: ಸುಧೀಂದ್ರ ಫಲೋದ್ಯಾನ ಸಸಿಗಳ ವಿತರಣೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕೊಡಮಾಡಿದ ಗಿಡಗಳ ವಿತರಣಾ ಕಾರ್ಯಕ್ರಮ ಇಂದು ಕೋಟೇಶ್ಚರ ಶ್ರೀ‌ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು.

Call us

Click Here

2025-26 ಜಿ.ಎಸ್.ಬಿ ಸಮಾಜದ ಶ್ರೀ ಕಾಶೀ ಮಠದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ವರ್ಷವಾಗಿದ್ದು ಇದಕ್ಕೆ ಪೂರ್ವಭಾವಿಯಾಗಿ ಸುಮಾರು 1 ಲಕ್ಷಕ್ಕೂ ಹೆಚ್ಚು ವಿವಿಧ ಬಗೆಯ ಹಣ್ಣುಗಳ ಸಸಿಯನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ ಸಮಾಜ ಬಾಂಧವರಿಗೆ‌ ಸಸಿಗಳನ್ನು ದೇವಳದ ಆಡಳಿತ ಮೊಕ್ತೇಸರ ದಿನೇಶ ಕಾಮತ್ ನೀಡುವುದರ ಮೂಲಕ ಚಾಲನೆ ನೀಡಿದರು. ಸುಮಾರು 300 ಗಿಡಗಳನ್ನು ನೀಡಲಾಯಿತು. ದೇವಳದ ಮೊಕ್ತೇಸರರು ಹಾಗೂ ಶ್ರೀ ರಾಮ ಸೇವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

four + fourteen =