ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿಯ ಸಹೋದರಿ ನಿವೇದಿತಾ ಪ್ರತಿಷ್ಠಾನ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿದ್ದ ನಾಗಲಕ್ಷ್ಮಿ ಬೆಂಗಳೂರು ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟು ‘ಎಲ್ಲರಲ್ಲಿಯೂ ಒಂದು ವಿಶೇಷ ಕೌಶಲ್ಯ ಇರುತ್ತದೆ, ಇಂದಿನ ಜೀವನದಲ್ಲಿ ಶಿಕ್ಷಣದ ಜೊತೆ-ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಳ್ಳುವುದು ಬಹಳ ಪ್ರಮುಖವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಪಡೆದ ಅನುಭವ ನಿಮ್ಮ ಜೀವನದ ಬದುಕಿನ ಅಡಿಪಾಯವಾಗಬೇಕೆಂಬ ಅರಿವನ್ನು ಮೂಡಿಸುವ ಪ್ರಯತ್ನ ಮಾಡಿದರು.
ಕಾರ್ಯಕ್ರಮದಲ್ಲಿ ರೋಟರಿ ರಿವರ್ ಸೈಡ್ ಕುಂದಾಪುರದ ಅಧ್ಯಕ್ಷರಾದ ಡಾ| ವಿಶ್ರಾಂತ್ ಎನ್. ಶೆಟ್ಟಿ, ರೋಟರಿ ಕಾರ್ಯದರ್ಶಿ ರೊನಾಲ್ಡ್ ಡಿ ಮೆಲ್ಲೊ, ನಿಕಟಪೂರ್ವ ಅಧ್ಯಕ್ಷರಾದ ಕೌಶಿಕ್ ಯಡಿಯಾಳ, ಸಹೋದರಿ ನಿವೇದಿತಾ ಪ್ರತಿಷ್ಠಾನದ ಬಳಗದವರು, ಕಾಲೇಜಿನ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










