ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ ಜೆಸಿಐ ಕುಂದಾಪುರ ಸಿಟಿ, ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕದಳ ಕುಂದಾಪುರ ಠಾಣೆ ಅವರು ಅಗ್ನಿನಂದಕ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ಜ್ಯೂನಿಯರ್ ಸಿಟಿ ವಿಂಗ್ ನ ಅಧ್ಯಕ್ಷರಾದ ಜೆಎಫ್‌ಡಿ ಕಿರಣ್ ವಹಿಸಿದ್ದರು.
ಕಾರ್ಯಕ್ರಮದ ವಿಶೇಷ ಆಹ್ವಾನಿತರು ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳದ ಠಾಣಾಧಿಕಾರಿಗಳಾಗಿರುವ ವಿ.ಸುಂದರ್ ಅವರು ಅಗ್ನಿನಂದಕದ ಕುರಿತಾಗಿ ಸಂಕ್ಷಿಪ್ತ ಮಾಹಿತಿ ನೀಡಿದರು. ತದನಂತರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿದರು.
ಮುಖ್ಯ ಅತಿಥಿಗಳಾಗಿ ಜ್ಯೂನಿಯರ್ ಜೆಸಿಐ ರಾಷ್ಟ್ರೀಯ ಮಟ್ಟದ ಸಂಯೋಜಕರಾಗಿರುವ ಜೆಎಫ್‌ಎಸ್ ರಾಜೇಶ್ ರಾಜನ್, ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್, ಜನತಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಜೆಎಫ್‌ಡಿ ಕಿರಣ್ ಕಾರ್ಯಕ್ರಮ ನಿರ್ವಹಿಸಿ, ಜನತಾ ಹೆಮ್ಮಾಡಿಯ ಪ್ರೌಢಶಾಲಾ ಸಹ-ಶಿಕ್ಷಕ ಜಗದೀಶ್ ವಂದಿಸಿದರು.