ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ಕುಂದಾಪುರದ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ ಹಾಗೂ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮ ಗುರುಗಳು ಹಾಗೂ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ರೆ. ಫಾ. ಪಾವ್ಲ್ ರೇಗೊ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿದ್ದ ಭಾಗವಹಿಸಿದ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಭಾಪತಿ ಜಯಕರ ಶೆಟ್ಟಿ ಅವರು ರೆಡ್ ಕ್ರಾಸ್ ಸಂಸ್ಥೆ ಬೆಳೆದು ಬಂದ ಬಗೆ, ಉದ್ದೇಶ ಹಾಗೂ ಅದರ ಕಾರ್ಯ ಕಲಾಪಗಳ ಬಗ್ಗೆ ಮಾಹಿತಿ ನೀಡಿ ತಾರತಮ್ಯವಿಲ್ಲದೆ ಒಗ್ಗಟ್ಟು, ಮಾನವೀಯ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ರೆಡ್ ಕ್ರಾಸ್ ಸಂಸ್ಥೆ ಎಂದು ಹೇಳಿದರು.
ಕುಂದಾಪುರದ ವೈದ್ಯರು ಡಾ. ಸೋನಿ ಡಿಕೋಸ್ತಾ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ರೆಡ್ ಕ್ರಾಸ್‌ನ ಖಜಾಂಚಿ ಶಿವರಾಮ ಶೆಟ್ಟಿ ರೆಡ್ ಕ್ರಾಸ್‌ನ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.