ಬೈಂದೂರು: ಕಿಂಡಿ ಅಣೆಕಟ್ಟು(ಬ್ಯಾರೇಜ್) ನಿರ್ಮಾಣದಿಂದ ಈ ಭಾಗದ ರೈತರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮದ್ದೋಡಿ-ಕುಂಜಳ್ಳಿ ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ರೂ. 35ಲಕ್ಷ ವೆಚ್ಚದ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಈ ಮೊದಲು ಇಲ್ಲಿನ ರೈತರು ಹರಿಯುವ ನದಿಗೆ ಸ್ವತಃ ಕಟ್ಟು ನಿರ್ಮಿಸಿ ಕೃಷಿಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬ್ಯಾರೇಜ್‌ನಿಂದ ರೈತಾಪಿ ವರ್ಗದವರಿಗೆ ಅನುಕೂಲವಾಗಲಿದೆ ಎಂದರು.
ಯಡ್ತರೆ ಗ್ರಾಪಂ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಉಪಾಧ್ಯಕ್ಷೆ ಕಲಾವತಿ ನಾಗರಾಜ್ ಗಾಣಿಗ, ಜಿಪಂ ಶಿಕ್ಷಣ ಮತ್ತು ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ತಾಪಂ ಸದಸ್ಯರಾದ ಎಸ್. ರಾಜು ಪೂಜಾರಿ, ಕೆ. ರಮೇಶ ಗಾಣಿಗ, ರಾಮ ಕೆ., ಗುತ್ತಿಗೆದಾರ ಪ್ರದೀಪ್ ಶೆಟ್ಟಿ, ಇಂಜಿನಿಯರ್ ಅಲ್ವಿನ್ ಹಾಗೂ ಊರಿನವರು ಉಪಸ್ಥಿತರಿದ್ದರು.