ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೇಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ವಿಭಾಗ, ರೋಟರಿ ಕ್ಲಬ್ ಬೈಂದೂರು ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಮಂಗಳವಾರ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾದ ಮೋಹನ್ ರೇವಣ್ಕರ್ ವಹಿಸಿದ್ದರು.
ಈ ವೇಳೆ ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ಡಾ. ಅಶ್ವಿನ್, ರೋಟರಿ ಇಂಡಿಯಾ ಲಿಟರಸ್ ಮಿಷನ್ ಜಿಲ್ಲಾ ನಿರ್ದೇಶಕ ಐ. ನಾರಾಯಣ್, ಕಾರ್ಯದರ್ಶಿ ಸುನಿಲ್ ಹೆಚ್. ಜಿ ಉಪಸ್ಥಿತರಿದ್ದರು.