ಎನ್.ಎಮ್.ಎಮ್.ಎಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ. 
ಉಡುಪಿ:
ಎನ್.ಎಮ್.ಎಮ್.ಎಸ್ ಪರೀಕ್ಷೆ (National Means cum Merit Scholarship examination) ಬರೆದು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವ ಹತ್ತನೇ ತರಗತಿ, ಪ್ರಥಮ – ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಕಳೆದ ವರ್ಷ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು ಎನ್.ಎಮ್.ಎಮ್.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಎನ್.ಎಸ್.ಪಿ ಪೋರ್ಟಲ್‌ನಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾಗಿದೆ.

Call us

Click Here

ಈಗಾಗಲೇ ಓಟಿಆರ್ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆ ಪಡೆದವರು ಫೇಸ್ ಅಥೇಂಟಿಕೇಶನ್ ಮಾಡಿಸಿ, ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಓಟಿಆರ್ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆ ಪಡೆಯದ ವಿದ್ಯಾರ್ಥಿಗಳು ಮತ್ತು ಈಗ 9ನೇ ತರಗತಿಯಲ್ಲಿ ಕಲಿಯುತ್ತಿರುವ ಹಾಗೂ ವಿದ್ಯಾರ್ಥಿವೇತನಕ್ಕೆ ಆಯ್ಕೆ ಆಗಿರುವ ವಿದ್ಯಾರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರಿಂದ ಮಾಹಿತಿಯನ್ನು ಪಡೆದು ಓಟಿಆರ್ ಸಂಖ್ಯೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎನ್.ಎಮ್.ಎಮ್.ಎಸ್ ನೋಡೆಲ್ ಅಧಿಕಾರಿ ಅಥವಾ ಜಿಲ್ಲಾ ನೋಡೆಲ್ ಅಧಿಕಾರಿ, ಡಯಟ್, ಉಡುಪಿ ಇಲ್ಲಿಯ ಉಪನ್ಯಾಸಕ ಚಂದ್ರನಾಯ್ಕ್ ಮೊ.ನಂ: 9449449602 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply