ಮಳೆಹಾನಿ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ, ವರದಿ ಸಲ್ಲಿಸಲು ಸೂಚನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Call us

Click Here

ಜಿಲ್ಲೆಯಲ್ಲಿ ಸಾಕಷ್ಟು ಮನೆ, ಕೃಷಿ ಭೂಮಿಗಳಿಗೆ ಹಾನಿಯಾಗಿದ್ದು ಪರಿಹಾರಕ್ಕೆ ಸೂಕ್ತಕ್ರಮವಹಿಸಲಾಗುವುದು. ರಸ್ತೆಗಳು ದುರಸ್ತಿಯಾಗಬೇಕಿದ್ದು, ಅದಕ್ಕಾಗಿ ಕ್ರಮವಹಿಸಲಾಗುವುದು. ಸೋಮೇಶ್ವರ ಗುಡ್ಡ ಜರಿತ ಸೇರಿದಂತೆ ಮಳೆಹಾನಿಯ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಅಗತ್ಯವಿರುವಲ್ಲಿ ತಕ್ಷಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ. ಸಂತೃಸ್ಥರಿಗೂ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದರು.

ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ ಪೂಜಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply