ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಯಕ್ಷಗಾನ ಹವ್ಯಾಸಿ ಕಲಾತಂಡದ ಮೂಲಕ ಹೊಸ ಕಲಾವಿದರ ಸೃಷ್ಠಿ ಸಾಧ್ಯ, ಯಕ್ಷಗಾನ ನಮಗೆ ಜ್ಞಾನ ವೃದ್ಧಿ ಜೊತೆಗೆ ಬದುಕಿಗೆ ಬೆಳಕು ಚೆಲ್ಲುವ ನೀತಿಗಳನ್ನು ಸಾರುತ್ತದೆ. ಮಕ್ಕಳಲ್ಲಿ ಯಕ್ಷಗಾನದ ಅಭಿರುಚಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಅವರು ಹೇಳಿದರು.
ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆದ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯಕ್ಷಸುಮನಸ ಹವ್ಯಾಸಿ ಕಲಾರಂಗ ರಿ. ಕೋಟ ಇವರ ಸಹಯೋಗದಲ್ಲಿ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಯಕ್ಷಗಾನ ಪ್ರಸಾಧನ ಪ್ರಮುಖರು ದಿ. ಬಾಲಕೃಷ್ಣ ನಾಯಕ್ ಹಂದಾಡಿ, ಯಕ್ಷಗಾನ ಭಾಗವತರು ದಿ. ಸುಬ್ರಹ್ಮಣ್ಯ ಧಾರೇಶ್ವರ್, ವೈದ್ಯರು ಹಾಗೂ ಗಾಯಕ ದಿ. ಡಾ. ಸತೀಶ್ ಪೂಜಾರಿ ಅವರಿಗೆ ಸುಮನಸ ನಮನ ಸಲ್ಲಿಸಲಾಯಿತು.
ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಯಕ್ಷಗಾನ ಪ್ರಸಂಗಕರ್ತ ವಿಷ್ಣುಮೂರ್ತಿ ನಾಯಕ್ ಬೇಳೂರು, ಗೋವಿಗಾಗಿ ಮೇವು ಅಭಿಯಾನ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಬ್ರಹ್ಮ ನಾರಾಯಣಗುರು ಸೇವಾ ಸಂಘ ರಿ. ಕೋಟದ ಅಧ್ಯಕ್ಷ ಸದಾನಂದ ಜಿ, ಕೋಟ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಪೂಜಾರಿ, ಗುತ್ತಿಗೆದಾರ ಸುರೇಶ್ ಗಾಣಿಗ ಶೇವಧಿ, ಉದ್ಯಮಿ ಕಿರಣ್ ತೆಕ್ಕಟ್ಟೆ, ಬಾಳೆಬೆಟ್ಟು ಫ್ರೆಂಡ್ಸ್ ರಿ. ಬಾಳೆಬೆಟ್ಟು ಅಧ್ಯಕ್ಷ ರತ್ನಾಕರ ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕ ಸತೀಶ್ ವಡ್ಡರ್ಸೆ ನಿರೂಪಿಸಿ, ಯಕ್ಷಸುಮನಸ ಕಲಾರಂಗದ ಅಧ್ಯಕ್ಷ ಪ್ರಸಾದ್ ಬಿಲ್ಲವ ಪ್ರಸ್ತಾಪಿಸಿ, ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ರವೀಂದ್ರ ರಾವ್ ವಂದಿಸಿದರು.