Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅತೀ ವೇಗವಾಗಿ ಬೆಳೆಯುವ ಆರ್ಥಿಕ ಶಕ್ತಿಗೆ ಪೂರಕವಾದ ಬಜೆಟ್: ಸಂಸದ ಬಿ.ವೈ. ರಾಘವೇಂದ್ರ
    ಊರ್ಮನೆ ಸಮಾಚಾರ

    ಅತೀ ವೇಗವಾಗಿ ಬೆಳೆಯುವ ಆರ್ಥಿಕ ಶಕ್ತಿಗೆ ಪೂರಕವಾದ ಬಜೆಟ್: ಸಂಸದ ಬಿ.ವೈ. ರಾಘವೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಮಂಡಿಸಿರುವ ಬಜೆಟ್ ಸರ್ವ ವ್ಯಾಪಿ, ಸರ್ವಸ್ಪರ್ಶಿಯಾಗಿದ್ದು, ದೇಶವು ವಿಶ್ವದಲ್ಲಿ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯಲು ಪೂರಕವಾದ ಬಡ್ಜೆಟ್ ಆಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

    Click Here

    Call us

    Click Here

    ಹಣದುಬ್ಬರ ಪ್ರಮಾಣವು ಕಳೆದ ವರ್ಷ 5.8% ಇದ್ದು, 4.5 % ಇಳಿಯುವಲ್ಲಿ ಈ ಬಡ್ಜೆಟ್ ಸಹಕಾರಿಯಾಗಲಿದೆ. ಅಲ್ಲದೇ ಪ್ರಸ್ತುತ ಈಗಿರುವ 3 ಟ್ರಿಲಿಯನ್ ಆರ್ಥಿಕ ವ್ಯವಹಾರವು 5 ಟ್ರಿಲಿಯನ್ ಅಷ್ಟಾಗುವ ಎಲ್ಲಾ ನಿರೀಕ್ಷೆಯಿದ್ದು ಜಿಡಿಪಿ ಪ್ರಮಾಣವು ಶೇ. 6.5 ರಿಂದ 7 ಕ್ಕೆ ಏರಿಕೆಯಾಗುವುದಾಗಿ ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    2030ರವರೆಗೆ ಭಾರತದಲ್ಲಿ ಪ್ರತಿ ವರ್ಷ 78 ಲಕ್ಷ ಯುವಕ/ಯುವತಿಯರಿಗೆ ಉದ್ಯೋಗ ದೊರೆಯುವಲ್ಲಿ ಈ ಬಾರಿಯ ಬಡ್ಜೆಟ್ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಕೈಗಾರಿಕಾ ಉತ್ಪನ್ನ ವಲಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

    ಈ ಬಾರಿ ಕೃಷಿ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮುಂದಿನ 5 ವರ್ಷಗಳಿಗೆ ವಿಸ್ತರಣೆ ಮಾಡುವುದರ ಮೂಲಕ ಬಡಜನರಿಗೆ ಅನ್ನ ನೀಡುವ ಯೋಜನೆ ಮುಂದುವರೆಸಲಾಗಿದೆ. ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಧ್ಯತೆ ನೀಡುವುದರ ಜೊತೆಗೆ ಉನ್ನತ ಶಿಕ್ಷಣಕ್ಕೆ ನೀಡಲಾಗುವ ಸಾಲದ ಮಿತಿಯನ್ನು ಹೆಚ್ಚಿಸಲಾಗಿದೆ. ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ. ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಆಧ್ಯತೆ ನೀಡುವ ಸಲುವಾಗಿ ಈಗಿರುವ ಮುದ್ರಾ ಯೋಜನೆಯಡಿ ಇರುವ ಸಾಲದ ಮಿತಿಯನ್ನು ಹೆಚ್ಚಿಸಲಾಗಿದೆ. ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆಧ್ಯತೆ ನೀಡಿದೆ,

    ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 3 ಕೋಟಿ ಹೆಚ್ಚುವರಿ ಹೊಸ ಮನೆಗಳ ನಿರ್ಮಾಣಕ್ಕೆ ಆಧ್ಯತೆ ನೀಡುವುದರ ಮೂಲಕ ಬಡವರ ಬಾಳಿಗೆ ಆಶಾಕಿರಣ ನೀಡಿದೆ. ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ಮುಂದಿನ ಹಂತದ ಜಾರಿಗೆ ನಿರ್ಧರಿಸಿದ್ದು, ಇದರಿಂದಾಗಿ 20 ಲಕ್ಷ ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಉತ್ತಮ ರಸ್ತೆ ಸಂಪರ್ಕ ದೊರೆಯಲಿದೆ. ಪ್ರವಾಸೋಧ್ಯಮಕ್ಕೆ ಹೆಚ್ಚಿನ ನೆರವು ನೀಡಲು ಜಾಗತಿಕ ಪ್ರವಾಸೋಧ್ಯಮ ಹಬ್ ಸ್ಥಾಪನೆಗೆ ಕ್ರಮ ಕೈಗೊಂಡಿದೆ. ಆದಾಯ ತೆರಿಗೆ ಪದ್ದತಿಯಲ್ಲಿ ಹೆಚ್ಚಿನ ನೆರವು ನೀಡುವದರ ಮೂಲಕ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ.

    Click here

    Click here

    Click here

    Click Here

    Call us

    Call us

    ಈ ರೀತಿ ಸರ್ವ ವ್ಯಾಪಿ, ಸರ್ವ ಸ್ಪರ್ಶಿ ಬಜೆಟ್ ಮಂಡಿಸಲು ಪ್ರೇರಕರಾದ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರಿಗೆ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    14 − twelve =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.