ಕ್ರಿಯೇಟಿವ್ ಕಾಲೇಜಿನಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ  ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ‘ಸಪ್ತಸ್ವರ’ ವೇದಿಕೆಯಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ಮಂಗಳವಾರದಂದು ಜರುಗಿತು.

Call us

Click Here

ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಬ್ರಹ್ಮಣ್ಯ ಎಚ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಇವರು ‘ ಶಿಕ್ಷಣ ಪಡೆದಾಗ ಜ್ಞಾನ ಮೂಡುತ್ತದೆ. ಆಗ ಸಮಾಜದಲ್ಲಿ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಲು ಸಾಧ್ಯ’ ಎಂದರು.

ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಸಂತೋಷ್ ಅವರು ಮಾತನಾಡಿ ‘ ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ‘ ಎಂದರು. ಸಭಾಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ‘ ಜೀವಿಸಲು ಗಾಳಿ, ನೀರು, ಆಹಾರ ಎಷ್ಟು ಅಗತ್ಯವೋ ಸಮಾಜದಲ್ಲಿ ಬದುಕಬೇಕಾದರೆ ಕಾನೂನಿನ ಅರಿವು ಅಷ್ಟೇ ಅವಶ್ಯಕವಾಗಿದೆ ‘ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆಯ ರವೀಂದ್ರ ಹಾಗೂ ಘನಶ್ಯಾಮ್ ಇನ್ನಿತರರು ಉಪಸ್ಥಿತರಿದ್ದರು.

‘ಕಾನೂನು ಅರಿವು’ ಮಾಹಿತಿ ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು, ವಸತಿ ನಿಲಯ ಪಾಲಕರು ಹಾಗೂ ಮೇಲ್ವಿಚಾರಕರು, ಬೋಧಕೇತರ ಸಿಬ್ಬಂದಿ ವರ್ಗದವರು, ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಕನ್ನಡ ಭಾಷಾ ಉಪನ್ಯಾಸಕರಾದ ಶಿವಕುಮಾರ ಅವರು ಸ್ವಾಗತಿಸಿ, ಕಾರ್ಯಕ್ರಮ  ನಿರೂಪಿಸಿದರು.  ಅರ್ಥಶಾಸ್ತ್ರ ಉಪನ್ಯಾಸಕರಾದ ಉಮೇಶ್ ಅವರು ವಂದನಾರ್ಪಣೆಗೈದರು.

Click here

Click here

Click here

Click Here

Call us

Call us

Leave a Reply