ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರಾವಳಿ ಕೊಂಚ ತಣ್ಣಗಾಗಿದ್ದ ಮಳೆಯ ಪ್ರಭಾವ ಮತ್ತೆ ಮರುಕಳಿಸಿದ್ದು, ಗುರುವಾರ ಮುಂಜಾನೆ ಗಾಳಿ ಸಹಿತ ಭಾರಿ ಮಳೆಯಾಗಿದೆ. ಗಾಳಿ ಮಳೆಗೆ ಮನೆ, ಕೃಷಿ, ತೋಟಹಾಗೂ ಆಸ್ತಿಪಾಸ್ತಿಗಳು ಅಪಾರ ಹಾನಿಯಾಗಿದೆ.
ಕುಂದಾಪುರ, ಬೈಂದೂರು, ಹೆಬ್ರಿ ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ ಗಾಳಿಮಳೆಗೆ ಜನಜೀವನ ತಲ್ಲಣಿಸಿದೆ. ಜುಲೈ 25ರಿಂದ 27ರ ತನಕ ಸಮುದ್ರದಲ್ಲಿ ಭಾರಿ ಗಾಳಿಯ ಜೊತೆಗೆ ಮಳೆಯೂ ಇರಲಿದೆ. ಮೀನುಗಾರಿಕೆಗೆ ತೆರಳದಂತೆ ಎಚ್ಚರಿಸಲಾಗಿದೆ.
ಗಾಳಿ ಹಾಗೂ ಮರ ಬಿದ್ದು, ಹಲವು ಮನೆಗಳಿಗೆ ಹಾನಿಯಾಗಿದ್ದು, ರೂ.30ಲಕ್ಷಕ್ಕೂ ಅಧಿಕ ನಷ್ಟ ಅಂದಾಜಿಸಲಾಗಿದೆ. ಕೃಷಿ ತೋಟಗಳಿಗೆ ರೂ.4 ಲಕ್ಷಕ್ಕೂ ಅಧಿಕ ಹಾನಿಯನ್ನು ಅಂದಾಜಿಸಲಾಗಿದೆ. ಅಲ್ಲಲ್ಲಿ ಮೆಸ್ಕಾಂ ಕಂಬಗಳು ನೆಲಕ್ಕುರುಳಿದ ಪರಿಣಾಮ ಹಲವೆಡೆ ವಿದ್ಯುತ್ ಸಂಪರ್ಕ ವ್ಯತ್ಯಗೊಂಡಿದೆ. ಅಧಿಕ ಮಳೆಯ ಹಿನ್ನೆಲೆಯಲ್ಲಿ ಗುರುವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು.