ಪತ್ರಿಕೆಗಳ ಓದು ಜ್ಞಾನ ವೃದ್ದಿಗೆ ಪೂರಕ: ಪ್ರಸಾದ ಶೆಟ್ಟಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ:
ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ   ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು.

Call us

Click Here

ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾ‍ರ್ಯಕ್ರಮದಲ್ಲಿ ಮಾತನಾಡಿದರು.

ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ.  ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನುನೀಡುತ್ತವೆ ಎಂದರು. 

ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ ಪುಟ, ಸ್ಥಳೀಯ, ರಾಜ್ಯ, ರಾಷ್ಟ್ರ ಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ  ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. 

ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Click here

Click here

Click here

Click Here

Call us

Call us

ಕ. ಸಾ.  ಪ ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ಕೆ. ವೇಣುಗೋಪಾಲ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಕರಾವಳಿ ಪ್ರದೇಶದಲ್ಲಿ  ಬೇರೆ  ಬೇರೆ ಮಾತೃಭಾಷೆಗಳನ್ನು ಹೊಂದಿದ್ದರು ಕನ್ನಡಕ್ಕೆ ವಿಶೇಷ ಸ್ಥಾನಮಾನ ನೀಡುತ್ತಾ ಅದನ್ನು ನಮ್ಮ ಜೀವನದ ಅಂಗವನ್ನಾಗಿ ಮಾಡಿಕೊಂಡಿದ್ದು ಉಲ್ಲೇಖನೀಯ ಎಂದರು.

ವಿದ್ಯಾರ್ಥಿನಿ ಖ್ಯಾತಿ ಪ್ರಾರ್ಥಿಸಿ, ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕ. ಸಾ. ಪ ತಾಲೂಕು ಘಟಕದ ಕಾರ್ಯದರ್ಶಿ ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ವಿಜಯಲಕ್ಷ್ಮಿ ಮಾರ್ಲಾ ವಂದಿಸಿದರು.

Leave a Reply