ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ – 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶೃಂಗೇರಿಯ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯಿತು.
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.
ಪುರೋಹಿತರಾದ ಜಿ. ರಾಘವೇಂದ್ರ ಆಚಾರ್ಯ, ಸಮಿತಿ ಅಧ್ಯಕ್ಷ ಸತೀಶ ಜಿ., ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಗೋಪಾಲ ಖಾರ್ವಿ ದಾವನಮನೆ, ಸುರೇಂದ್ರ ಖಾರ್ವಿ, ರಘುವೀರ ಕೆ., ಮಹಿಳಾ ಸಮಿತಿ ಕಾರ್ಯದರ್ಶಿ ಸುಜಾತ ಬಾಬು ಖಾರ್ವಿ, ಉಷಾ ದಿನಕರ, ಸ್ವಾತಿ ಮಡಿವಾಳ, ನಾಗಪ್ಪಯ್ಯ ಪಟೇಲ್, ಪುರುಷೋತ್ತಮ ಆರ್ಕಾಟಿ, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ ಅಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು.