ಕುಂದಾಪುರ ಆರ್. ಎನ್. ಶೆಟ್ಟಿ ಪ. ಪೂ ಕಾಲೇಜು: ಜ್ಯೂನಿಯರ್ ರೆಡ್‌ ಕ್ರಾಸ್ ಘಟಕದ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
“ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು‌ ನೀಡಲು ಮುಂದಾಗಬೇಕು”  ಎಂದು ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಕರೆ ನೀಡಿದರು.

Call us

Click Here

ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಖಜಾಂಚಿಯವರಾದ ಶಿವರಾಮ್ ಶೆಟ್ಟಿ ಅವರು ರೆಡ್‌ಕ್ರಾಸ್ ಸೇವಾತತ್ವಗಳ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್‌ ಕುಮಾರ ಶೆಟ್ಟಿ ಅವರು ಕುಂದಾಪುರದ ರೆಡ್ ಕ್ರಾಸ್ ಘಟಕದ ಉದಾರತೆ ಮತ್ತು ಸೇವಾಕಾರ್ಯಗಳನ್ನು ಸ್ಮರಿಸಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷರು‌ ಮತ್ತು ಖಜಾಂಚಿಅವರು ಪ್ರಥಮ ಚಿಕಿತ್ಸಾ ಕಿಟ್‌ನ್ನು ಕಾಲೇಜಿನ ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು. ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ರವಿ ಉಪಾಧ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು. 

Leave a Reply