ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಆಗದಂತೆ ಸಮನ್ವಯದಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಇದನ್ನು ತಡೆಗಟ್ಟುವಲ್ಲಿ ಪೋಲೀಸ್, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಪ್ರಕರಣಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

Call us

Click Here

ಅವರು ಅಂದು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು.

ಮಾನವನ ಅಂಗಾಂಗಗಳಿಗೋಸ್ಕರ ಆಶ್ರಯ ಇಲ್ಲದವರಿಗೆ ಆಮಿಷ ತೋರಿಸಿ ಕಳ್ಳ ಸಾಗಾಣಿಕೆ ಮಾಡಲಾಗುತ್ತದೆ. ಹಣದ ಆಮೀಷದಿಂದ ಹಾಗೂ ಬಡತನದಲ್ಲಿರುವವರಿಗೆ ಹಣದ ಆಮಿಷವೊಡ್ಡಿ ಇಂತಹ ಕೃತ್ಯಗಳಿಗೆ ತೊಡಗಿಸಲಾಗುತ್ತಿದೆ. ಈ ಬಗ್ಗೆ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ, ಪ್ರಾಸ್ತಾವಿಕವಾಗಿ ಮಾತನಾಡಿ, ಮಾನವ ಕಳ್ಳ ಸಾಗಾಣೆ, ಜಾಗತಿಕವಾಗಿ ಸಮಾಜವನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಬಲವಂತವಾಗಿ ದೈಹಿಕ ಶೋಷಣೆ, ಬಾಲಕಾರ್ಮಿಕತೆ, ಭಿಕ್ಷಾಟನೆ, ಗೃಹಬಳಕೆ, ಬಾಲ್ಯವಿವಾಹ, ಅಂಗಾಂಗ ಕಸಿಯುವಿಕೆ, ಸಮಾಜ ಬಾಹಿರ ಕೃತ್ಯಗಳಲ್ಲಿ ತೊಡಗಿಸುವ ಉದ್ದೇಶದಿಂದ ಸಾಗಾಣಿಕೆ ಮಾಡಲಾಗುತ್ತದೆ. ಇದೊಂದು ಸಂಘಟಿತ ಅಪರಾಧವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದು, ಅವರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರ ಮತ್ತು ಇಲಾಖೆಯದ್ದಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಕಾನೂನು ನೆರವು ಅಭಿರಕ್ಷಕ ರಾಜು ಪೂಜಾರಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದ್ದು, ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

Click here

Click here

Click here

Click Here

Call us

Call us

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಆರಕ್ಷಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply