ಅಗಸ್ಟ್ 2ರಂದು ಉಡುಪಿ ಜಿಲ್ಲಾದ್ಯಂತ ಶಾಲೆ – ಪಿಯು ಕಾಲೇಜುಗಳಿಗೆ ರಜೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಅ.1:
ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 02ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ.

Call us

Click Here

ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜುಲೈ 31ರಿಂದ ಭಾರಿ ಮಳೆಯಾಗುತ್ತಿದ್ದು, ಅಗಸ್ಟ್ 5ರ ತನಕವೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ. 1077 ಹಾಗೂ 0820-2574802 ಅನ್ನು ಸಂಪರ್ಕಿಸಬಹುದಾಗಿದೆ

Leave a Reply