ಸಾಧನೆಗೈದ ಮಕ್ಕಳಿಗೆಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ರಾಜ್ಯ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023-24 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ 07 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ – ಔಟ್ ಹಿಂಭಾಗ, ಕೆ. ಹೆಚ್. ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ – 580004 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವೆಬ್‌ಸೈಟ್ https://balavikasaacademy.karnataka.gov.in ಅಥವಾ ದೂ. ಸಂ:0836-2465490 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply