ಕುಂದಾಪ್ರ ಭಾಷೆ ಜನರ ಭಾವನೆಯ ನಾಡಿಮಿಡಿತ – ಜಯರಾಮ್ ಶೆಟ್ಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಕುಂದಾಪ್ರ ಭಾಷೆ ಕೇವಲ ಮಾತನಾಡುವ ಭಾಷೆಯಾಗಿ ಉಳಿಯದೇ ಜನರ ಭಾವನೆಯ ನಾಡಿಮಿಡಿತವಾಗಿದೆ. ಯಾವುದೇ ಸಂದರ್ಭದಲ್ಲಿ ಹಿಂಜರಿಕೆ ಪಡೆಯದೇ ಕುಂದಾಪ್ರ ಭಾಷೆಯನ್ನು ಬಳಸಬೇಕು. ಇಲ್ಲಿನ ಸಂಸ್ಕೃತಿಯ ವೈವಿಧ್ಯತೆಯ ಅನಾವರಣಕ್ಕೆ ವಿಶ್ವ ಕುಂದಾಪ್ರ ದಿನಚರಣೆ ಸಾಕ್ಷಿಯಾಗುತ್ತಿರುವುದು ಸಂತಸದ ವಿಷಯ ಎಂದು ಪ್ರಗತಿಪರ ಕೃಷಿಕ ಜಯರಾಮ್ ಶೆಟ್ಟಿ ಅವರು ಹೇಳಿದರು.

Call us

Click Here

ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಡಾ ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕುಂದಾಪ್ರ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ, ಯು – ಚಾನೆಲ್ ಆಶ್ರಯದಲ್ಲಿ ನಡೆದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಉತ್ಸಾವ ಹೊಸ ಹೂಂಗು ಕೋಲೆ… ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಸಾಂಸ್ಕೃತಿಕ ಚಿಂತಕ ಪ್ರದೀಪ್ ಬಸ್ರೂರು, ಚಿತ್ರಕಲಾ ಶಿಕ್ಷಕ ಗಿರೀಶ್ ಆಚಾರ್ಯ ವಕ್ವಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕ ಸತೀಶ್ ವಡ್ಡರ್ಸೆ ನಿರೂಪಿಸಿ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಸ್ತಾಪಿಸಿದರು.

ಸಭಾ ಕಾರ್ಯಕ್ರಮದ ನಂತರ ಗಮ್ಜಾಲ್ ಹರಟೆ ತಂಡದವರಿಂದ ಹರಟೆ, ಮಕ್ಕಳಿಂದ ನಮ್ಮ ಕುಂದಾಪ್ರ.. ನಮ್ಮ ಸಂಪ್ರದಾಯ ದೃಶ್ಯ ಕಥನ ಹಾಗೂ ಕುಂದಾಪ್ರ ಕನ್ನಡ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.

Click here

Click here

Click here

Click Here

Call us

Call us

Leave a Reply