ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಕಾರಿ ಪ್ರೌಢಶಾಲೆ ಬಸ್ರೂರು ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ರಿಧಾ ಫರ್ವಿನ್ ಪ್ರಥಮ ಸ್ಥಾನ (ಪ್ರೌಢಶಾಲೆ ವಿಭಾಗ), ಕಿಶನ್ ಶೆಟ್ಟಿ ಮತ್ತು ತನ್ಮಯ್ ತೃತೀಯ ಸ್ಥಾನ ಪಡೆದಿರುತ್ತಾರೆ ರಿಧಾ ಫರ್ವಿನ್ ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ಕರಾಟೆ ಶಿಕ್ಷಕಿ ಮೇಘನಾ ತರಬೇತಿ ನೀಡಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಾಧಿಕಾರಿಗಳು, ಮುಖ್ಯ ಶಿಕ್ಷಕರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.