ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ 2024 – 26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗುತ್ತಿಗೆದಾರರು, ಯುವ ಸಂಘಟಕ, ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಪ್ರಸ್ತುತ ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅವರು ವಿವಿಧ ಸಂಘ – ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅವರು ಬಸ್ರೂರು ನಿವೃತ್ತ ಬ್ಯಾಂಕ್ ಉದ್ಯೋಗಿ ಸುಭಾಷ್ ಚಂದ್ರ ಶೆಟ್ಟಿ ಹಾಗೂ ರಸಿಕ ಎಸ್. ಶೆಟ್ಟಿ ದಂಪತಿಯ ಸುಪುತ್ರರಾಗಿದ್ದಾರೆ.