ಸುಣ್ಣಾರಿ ಎಕ್ಸಲೆಂಟ್ ಪಿ. ಯು. ಕಾಲೇಜು ಮತ್ತು ಹೈಸ್ಕೂಲ್: ಯೋಗಾಸನ ಸ್ಪರ್ಧೆ ಉಧ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಎಕ್ಸಲೆಂಟ್ ಪಿ. ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ ಕುಂದಾಪುರ ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಲಯ ಮಟ್ಟದ ಯೋಗಾಸನ ಸ್ಪರ್ಧೆ ಎಕ್ಸಲೆಂಟ್ ಸಂಸ್ಥೆಯಲ್ಲಿ ನೆರೆವೇರಿತು.

Call us

Click Here

ಸಭಾ ಕಾರ್ಯಕ್ರಮವನ್ನು ಚಿನ್ಮಯಿ ಆಸ್ಪತ್ರೆ ಕುಂದಾಪುರ ಇಲ್ಲಿನ ಆಡಳಿತ ನಿರ್ದೇಶಕರು ಹಾಗೂ ಚರ್ಮರೋಗ ತಜ್ಙರಾದ ಡಾ. ಉಮೇಶ್ ಪುತ್ರನ್ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕವಾಗಿ ಬೆಳೆವಣಿಗೆಗೆ ಯೋಗವು ಪ್ರಮುಖ ಪಾತ್ರ ವಹಿಸುತ್ತದೆ, ಜತೆಗೆ ಭಾವನಾತ್ಮಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಅಂಶಗಳನ್ನು ಒಳಗೊಂಡ ಯೋಗ ಅಧ್ಯಯನದಿಂದ ಯಶಸ್ವಿ ನಾಗರಿಕನಾಗಲು ಸಾಧ್ಯವಿದೆ.’ ಎಂಬುದನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಇದರ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಹುಣ್ಸೆಮಕ್ಕಿ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ವಸಂತ, ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘ ಕುಂದಾಪುರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಡುಪಿ ವಲಯ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘ ಉಡುಪಿ ಜಿಲ್ಲೆ ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ, ಪ್ರೌಢಶಾಲಾ  ಅನುದಾನಿತ ಶಾಲಾ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷರಾದ ಪ್ರದೀಪ ಶೆಟ್ಟಿ, ಹೊಂಬಾಡಿ-ಮಂಡಾಡಿ ಯೋಗ ಶಿಕ್ಷಕರಾದ ಕಿರಣ್ ಕುಮಾರ್, ಸ. ಹಿ. ಪ್ರಾ. ಶಾಲೆ ಹೆಸ್ಕೂತ್ತೂರು ಯೋಗ ಶಿಕ್ಷಕರಾದ ಸಂಜೀವ ಹೆಸ್ಕೂತ್ತೂರು ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಸರೋಜಿನಿ ಆಚಾರ್ಯ ಸ್ವಾಗತಿಸಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಸ್ತಾವನೆಗೈದು, ಶಿಕ್ಷಕ ಸಂದೀಪ್ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ವಂದಿಸಿದರು. 

Click here

Click here

Click here

Click Here

Call us

Call us

Leave a Reply