ತಾಲೂಕಿನಾದ್ಯಂತ ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ – ಬೈಂದೂರು ತಾಲೂಕಿನೆಲ್ಲೆಡೆ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ ಹಾಗೂ ಸುಬ್ರಹ್ಮಣ್ಯ ದೇವಾಲಯಗಳಿಗೆ ತೆರಳಿದ ಭಕ್ತಾದಿಗಳು ನಾಗನಿಗೆ ಹಾಲು, ಏಳನೀರು, ಕೇದಿಗೆ ಹೂವನ್ನು ಸಮರ್ಪಿಸಿ, ಪೂಜೆ ಸಲ್ಲಿಸಿ ಪುನೀತರಾದರು.

Call us

Click Here

ತಾಲೂಕಿನ ಪ್ರಸಿದ್ಧ ದೇವಾಲಯವಾದ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾಳಾವರದ ಶ್ರೀ ಮಹಾಲಿಂಗೇಶ್ವರ ಕಾಳಿಂಗ(ಸುಬ್ರಹ್ಮಣ್ಯ) ದೇವಸ್ಥಾನ, ಉಳ್ಳೂರು ಕಾರ್ತಿಕೇಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜಾವಿಧಿಗಳು ನೆರವೇರಿದವು. ಭಕ್ತಾದಿಗಳಿಗೆ ನೈವೇದ್ಯದ ಪ್ರಸಾದ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು.

ತಾಲೂಕಿನ ನೂರಾರು ಶ್ರೀ ನಾಗನಿಗೆ ದೇವರಿಗೆ ವಿಶೇಷಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ: https://kundapraa.com/?p=51077

Leave a Reply