ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಸೌಲಭ್ಯಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ತಂತ್ರಾಂಶ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply