ಬೀಜಾಡಿ: ಟಿಪ್ಪರ್‌ ಡಿಕ್ಕಿಯಾಗಿ ನಜ್ಜುಗುಜ್ಜಾದ ಕಾರು

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಬೀಜಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಟಿಪ್ಪರ್ ಗುದ್ದಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Call us

Click Here

ಬೀಜಾಡಿ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಹೋಗುತ್ತಿದ್ದ ಕಾರಿಗೆ ಕುಂಭಾಸಿಯಿಂದ ಕುಂದಾಪುರದ ಕಡೆಗೆ ಅತಿವೇಗವಾಗಿ ಬಂದ ಟಿಪ್ಪರ್ ಕಾರಿಗೆ ಗುದ್ದಿದ ಪರಿಣಾಮ ಕಾರು ಸಂಪೂರ್ಣ ಹಾನಿಯಾಗಿದೆ. ಟಿಪ್ಪರ್ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಮಧ್ಯದಲ್ಲಿ ನಿಂತಿದೆ.

ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಟ್ರಾಫಿಕ್‌ ಸಮಸ್ಯೆ ಎದುರಾಯಿತು. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply