ಶಟಲ್ ಬ್ಯಾಡ್ಮಿಂಟನ್: ಗಂಗೊಳ್ಳಿ ಎಸ್‍ವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಕುಂದಾಪುರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರೌಢಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Call us

Click Here

ಪ್ರೌಢಶಾಲಾ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಕೆಪಿಎಸ್ ಕೋಟೇಶ್ವರ ತಂಡವನ್ನು ಸೋಲಿಸಿದರೆ, ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಕುಂದಾಪುರದ ಸೈಂಟ್ ಪಿಯೂಸ್ ಶಾಲೆ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕುಂದಾಪುರದ ಸೈಂಟ್ ಪಿಯೂಸ್ ಶಾಲೆ ಬಾಲಕರ ತಂಡವು ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವನ್ನು ಸೋಲಿಸಿದರೆ, ಹಳ್ನಾಡು ತುಳಸೀ ವಿದ್ಯಾ ಮಂದಿರ ಬಾಲಕಿಯರ ತಂಡವು ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

೧೪ ವರ್ಷ ಕೆಳಗಿನ ಬಾಲಕರ ವಿಭಾಗದಲ್ಲಿ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಆರ್ಯನ್ ವಿ. ಕೆ. ಮತ್ತು ಬಾಲಕಿಯರ ವಿಭಾಗದಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮಾನ್ವಿತಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ವಿಜಯಾ ಆರ್ .ಪೈ, ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಪತ್ರಕರ್ತ ಬಿ. ರಾಘವೇಂದ್ರ ಪೈ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್, ದೀಕ್ಷಿತ್ ಮೇಸ್ತ, ಲಾವಣ್ಯ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಸಹಶಿಕ್ಷಕಿಯರಾದ ರೇಷ್ಮಾ ನಾಯಕ್ ಸ್ವಾಗತಿಸಿದರು. ಸಂಗೀತಾ ಕಾರ್ಯಕ್ರಮ ನಿರ್ವಹಿಸಿದರು. ಉಷಾ  ವಂದಿಸಿದರು.

Leave a Reply