ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಎಕ್ಸಲೆಂಟ್ ಪ್ರೌಢ ಶಾಲೆ ಸುಣ್ಣಾರಿ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ 17ರ ವಯೋಮಾನದ ಬಾಲಕ- ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.










