ಡಾ. ಬಿ. ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕಗಳಿಗೆ ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಪ್ರತಿಷ್ಠಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಅವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ ಹೆಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು.

Call us

Click Here

ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸೇತುಬಂಧ/ ಬ್ರೈಂಡ್ಜ್ ಕೋರ್ಸ್‍ ತರಗತಿಗಳನ್ನು ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳಿಗೆ ಕೈಗಾರಿಕೆ, ಉದ್ಯಮ, ವ್ಯಾಪಾರ ಮುಂತಾದವುಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ನೀಡುವುದು ಮತ್ತು ಪ್ರಾಯೋಗಿಕವಾಗಿ ವಾಣಿಜ್ಯ ವಿಷಯಗಳನ್ನು ಅರ್ಥೈಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗ ಹಾಗೂ ವಾಣಿಜ್ಯ ಮತ್ತು ನಿರ್ವಹಣಾ ಘಟಕದ ಜಂಟಿ ಆಶ್ರಯದಲ್ಲಿ ಕಾರ್ಖಾನೆಗೆ ಭೇಟಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಾರ್ಖಾನೆಯ ಮ್ಯಾನೇಜರಾದ ದಯಾನಂದ ಗಾಣಿಗ, ಅಕೌಂಟೆAಟ್  ಸತೀಶ್ ಅಡಿಗ ಅವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಮಾಹಿತಿ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಜೇಶ್ ಶೆಟ್ಟಿ, ದೀಪಾ ಪೂಜಾರಿ, ಶರತ್ ಕುಮಾರ್, ಅಕ್ಷಯ್ ಕುಮಾರ್, ಜೋಸ್ಲಿನ್ ಅಲ್ಮೇಡಾ, ವಿನಯಾ ವಿ. ಶೆಟ್ಟಿ, ಶ್ವೇತಾ ಭಂಡಾರಿ, ಪೂಜಾ ಕುಂದರ್, ಸುಹಾಸ್ ಜಟ್ಟಿಮನೆ ಹಾಗೂ ನಿರ್ವಹಣಾ ವಿಭಾಗದ ಉಪನ್ಯಾಸಕಿ ಚೈತಾಲಿ ಉಪಸ್ಥಿತರಿದ್ದರು.

Leave a Reply