ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ’ ನಶಾಮುಕ್ತ ಭಾರತ ಅಭಿಯಾನ ’ 5ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮವು ಇತ್ತೀಚಿಗೆ ಜರುಗಿತು.
ಮಾದಕ ವ್ಯಸನವು ವ್ಯಸನಿ, ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ, ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಹಿಂದಿ ಭಾಷಾ ವಿಭಾಗ ಮುಖ್ಯಸ್ಥರಾದ ವಿನಾಯಕ ಜೋಗ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.









