ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kaad.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832, 8050770004, 8050770005 ಮತ್ತು 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.