ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆ 78ನೇ ಸ್ವಾತಂತ್ರ್ಯ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮಾ ಶೆಟ್ಟಿ ಅವರು 78ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣ ಆಚರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ತದನಂತರ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳ ನಡುವೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ವಿವಿಧ ತಂಡಗಳ ವಿದ್ಯಾರ್ಥಿಗಳು ಏಕ ಪಾತ್ರಾಭಿನಯ ಮತ್ತು ಹಾಡಿನ ಮೂಲಕ ತಮ್ಮಲ್ಲಿರುವ ದೇಶಭಕ್ತಿಯನ್ನು ಇನ್ನಷ್ಟು ಇಮ್ಮಡಿಗೊಳಿಸಿಕೊಂಡು, ಎಲ್ಲರ ಕಣ್ಮನಗಳನ್ನು ತಣಿಸಿದರು.
ಶಿಕ್ಷಕರು ಸೈನಿಕ ವಿಷಯವನ್ನಾಧರಿಸಿ ಕಿರುನಾಟಕವನ್ನು ಮಾಡುವ ಮೂಲಕ ಸೈನಿಕರ ಬದುಕಿನ ಮಹತ್ವವನ್ನು ಅರ್ಥಪೂರ್ಣವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್. ಪ್ಯಾಟ್ರಿಕ್ , ಕಾಲೇಜು ಪ್ರಾಂಶುಪಾಲರಾದ ಅವಿನಾಶ್, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅಂಜನ್ ನಿರೂಪಿಸಿದರು, ಉಮೇಶ್ ವಂದಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.