ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ. ಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ಕೆ. ಸಿ. ಧ್ವಜಾರೋಹಣ ನೆರವೇರಿಸಿ ಮಾತನಾಡಿ ಹುತಾತ್ಮರಾದ ವೀರ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಕೇವಲ ಈ ದಿನ ಸ್ಮರಿಸದೇ ಅವರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ಎಲ್ಲರೂ ಕೈ ಜೋಡಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪರಿಸರ ಸಂರಕ್ಷಣೆ ಅರಿವು ಮತ್ತು ಅಗತ್ಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್, ಎಮರಾಲ್ಡ್, ಸಪಾಯರ್, ರೂಬಿ, ಟೋಪಾಜ್ ತಂಡಗಳಿಂದ ಆಕರ್ಷಕ ಪಥಸಂಚಲನ ವೀಕ್ಷಿಸಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ರಿ. ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಸರ್ವರಿಗೂ ಸ್ವತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ಉಪಾಪ್ರಾಂಶುಪಾಲ ಮಂಜುನಾಥ್ ಬೈರಿ ,ವಿಜ್ಞಾನ ವಿಭಾಗದ ಮುಖ್ಯಸ್ಥೆ ನಿರ್ಮಲಾ ಕುತ್ಯಾಡಿ, ಬೋಧಕ ಮತ್ತು ಬೋಧಕೇತರ ವರ್ಗ, ವಿದ್ಯಾರ್ಥಿ ಪ್ರತಿನಿದಿಗಳು, ಮತ್ತು ಪಾಲಕರು ಉಪಸ್ಥಿತರಿದ್ದರು.
ಶಿಕ್ಷಕಿ ಚೈತ್ರಾ ಸ್ವಾಗತಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಗೀತಾ ವಂದಿಸಿ ಶಿಕ್ಷಕಿ ಅವಿನಾ ಡಿಸೋಜಾ ನಿರೂಪಿಸಿದರು ನಂತರ ವಿದ್ಯಾರ್ಥಿಗಳಿಂದ ಏಕಪಾತ್ರಾಭಿನಯ ನಡೆಯಿತು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಶಂಕರನಾರಾಯಣ ಗ್ರಾಮಪಂಚಾಯತ ವತಿಯಿಂದ ನೀಡಿದ ಸಿಹಿ ವಿತರಿಸಲಾಯಿತು.