ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: 2 ಪ್ರಶಸ್ತಿ ಬಾಚಿಕೊಂಡ ಕಾಂತಾರ. ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಮನರಂಜನಾ ಚಿತ್ರ ವಿಭಾಗದಲ್ಲಿಯೂ ‘ಕಾಂತಾರ’ ಸಿನಿಮಾಗೆ ಪ್ರಶಸ್ತಿ ಲಭಿಸಿದೆ. ಈ ಮೂಲಕ ಈ ಸಲದ ರಾಷ್ಟ್ರ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಸಿನಿಮಾಗಳು ಹೊಸ ದಾಖಲೆ ಬರೆದಿವೆ.

Call us

Click Here

ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾ, ಕೇವಲ 16 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿ, ಬರೋಬ್ಬರಿ 400 ಪ್ಲಸ್‌ ಕೋಟಿ ಗಳಿಕೆ ಕಂಡಿತ್ತು. 2022ರ ಸೆಪ್ಟೆಂಬರ್‌22ರಂದು ಕನ್ನಡದಲ್ಲಿ ಮಾತ್ರ ತೆರೆಕಂಡಿದ್ದ ಈ ಸಿನಿಮಾ, ಅದಾದ ಬಳಿಕ ಬೇರೆ ಭಾಷೆಗಳಿಗೂ ಡಬ್‌ ಆಗಿ ಮೋಡಿ ಮಾಡಿತ್ತು. ಇದೀಗ ಇದೇ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಗರಿ ಮುಡಿಗೇರಿದೆ.

2022ರ ಜನವರಿ 1ರಿಂದ ಡಿಸೆಂಬರ್ 31 ಅವಧಿಯಲ್ಲಿ ಸೆನ್ಸಾರ್ ಆಗಿರುವ ಸಿನಿಮಾಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಇದೀಗ ಈ ಪ್ರಶಸ್ತಿ ಪಟ್ಟಿಯ ಪೈಕಿ ಅತ್ಯುತ್ತಮ ನಟ ಪ್ರಶಸ್ತಿಗಾಗಿ ಸೌತ್‌ನ ಇಬ್ಬರು ಸ್ಟಾರ್‌ ನಟರ ಹೆಸರು ಮುನ್ನಲೆಯಲ್ಲಿತ್ತು. ಮಲಯಾಳಂನ ಮಮ್ಮುಟ್ಟಿ ಮತ್ತು ಸ್ಯಾಂಡಲ್‌ವುಡ್‌ ನಟ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರಿಗೆ ರಾಷ್ಟ್ರ ಪ್ರಶಸ್ತಿ ಸಿಗುವ ಸಾಧ್ಯತೆ ಇತ್ತು. ಆ ಪೈಕಿ ರಿಷಬ್‌ ಶೆಟ್ಟಿ ಅತ್ಯುತ್ತಮ ನಟರಾಗಿ ಹೊರಹೊಮ್ಮಿದ್ದಾರೆ.

ಇತ್ತೀಚೆಗೆ ಘೋಷಣೆ ಆಗಿದ್ದ 68ನೇ ಫಿಲಂಫೇರ್‌ ಪ್ರಶಸ್ತಿಯಲ್ಲಿಯೂ ಕಾಂತಾರ ಸಿನಿಮಾ ಬರೋಬ್ಬರಿ ಆರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಕಾಂತಾರ ಪ್ರಶಸ್ತಿ ಪಡೆದರೆ, ಅತ್ಯುತ್ತಮ ನಟ, ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ), ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ಸಂಗೀತ ನಿರ್ದೇಶನ, ಅತ್ಯುತ್ತಮ ಹಿನ್ನೆಲೆ ಗಾಯನ ವಿಭಾಗದಲ್ಲಿ ಕಾಂತಾರ ಸಿನಿಮಾ ಪ್ರಶಸ್ತಿ ಪಡೆದಿತ್ತು. ಇದೀಗ ಇದೇ ಸಿನಿಮಾ 70ನೇ ರಾಷ್ಟ್ರ ಪ್ರಶಸ್ತಿಯಲ್ಲಿಯೂ ಮೋಡಿ ಮಾಡುತ್ತಿದೆ. ‘ಅಮೆಜಾನ್ ಪ್ರೈಮ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ‘ಕಾಂತಾರ’ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಇನ್ನೂ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಾಣದ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’, ಮತ್ತು ‘ಕಾಂತಾರ’ (Kantara) ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿಗೆ ಸಿಕ್ಕಿದೆ. ಜೊತೆಗೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ‘ಕೆಜಿಎಫ್ 2’ಗೆ (KGF 2) ಸಿಕ್ಕಿದೆ.

Click here

Click here

Click here

Click Here

Call us

Call us

ಒಟ್ಟು 7 ರಾಷ್ಟ್ರೀಯ ಪ್ರಶಸ್ತಿಗಳು ಸ್ಯಾಂಡಲ್‌ವುಡ್‌ ಅರಸಿ ಬಂದಿದೆ.
ಅತ್ಯುತ್ತಮ ನಟ – ರಿಷಭ ಶೆಟ್ಟಿ (Best Actor – Rishab Shetty -Kantara)
ಅತ್ಯುತ್ತಮ ಮನೋರಂಜನಾ ಚಿತ್ರ – ಕಾಂತಾರ (Best Entertaining Film awards – Kantara )
ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ-ಕೆಜಿಎಫ್ ಚಾಪ್ಟರ್ 2 (Best Kannada Film – KGF: Chapter 2)
ಅತ್ಯುತ್ತಮ ಆ್ಯಕ್ಷನ್ ನಿರ್ದೇಶಕ- ಕೆಜಿಎಫ್-2: Best Action Direction – KGF: Chapter 2
ಅತ್ಯುತ್ತಮ ಸಂಕಲನ- ಸುರೇಶ್ ಅರಸ್, ಮಧ್ಯಂತರ (Best Editing – Madhyantara)
ಅತ್ಯುತ್ತಮ ಚೊಚ್ಚಲ ನಿರ್ದೇಶಕ: ಬಸ್ತಿ ದಿನೇಶ್‌ ಶೆಣೈ (Madhyantara-ಕನ್ನಡ ಕಿರುಚಿತ್ರ)
ಉತ್ತಮ ಸಾಂಸ್ಕೃತಿಕ ಚಿತ್ರ : ರಂಗವಿಭೋಗ

Leave a Reply