ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೃಷಿ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲು ರೈತರ ಶ್ರಮ ಮತ್ತು ಕೃಷಿಯಲ್ಲಿ ಸಕ್ರೀಯ ಪಾಲುಗಾರಿಕೆ ಕಾರಣವಾಗಿರುತ್ತದೆ. ಅಂತಹ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮಳೆಯಾಶ್ರಿತ ಭತ್ತದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಜಿಲ್ಲೆಯ ರೈತರು ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಪರ್ಧೆಗೆ ಅಗತ್ಯ ದಾಖಲಾತಿಗಳಾದ ಪಹಣಿ, ಜಾತಿ ಪ್ರಮಾಣ ಪತ್ರ, ರೈತರ ಛಾಯಾಚಿತ್ರ, ಗುರುತಿನ ಚೀಟಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳೊಂದಿಗೆ ಆಗಸ್ಟ್ 31 ರ ಒಳಗಾಗಿ ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೆಂದ್ರ ಹಾಗೂ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಕೆ-ಕಿಸಾನ್ ಪೋರ್ಟಲ್ ಅಡಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಧ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.