Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪ್ರ ಕನ್ನಡ ಹಬ್ಬಕ್ಕೆ ಚಾಲನೆ. ನಟ ರಿಷಬ್ ಶೆಟ್ಟಿಗೆ ಊರ ಗೌರವ ಪ್ರದಾನ
    Uncategorized

    ಕುಂದಾಪ್ರ ಕನ್ನಡ ಹಬ್ಬಕ್ಕೆ ಚಾಲನೆ. ನಟ ರಿಷಬ್ ಶೆಟ್ಟಿಗೆ ಊರ ಗೌರವ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು
    : ನನ್ನ ಸಿನಿಮಾದ ಕಥೆಗಳಿಗೆ ನನ್ನ ಊರು ಮತ್ತು ಯಕ್ಷಗಾನವೇ ಪ್ರೇರಣೆ ಎಂದು ಖ್ಯಾತ ನಟ- ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು.

    Click Here

    Call us

    Click Here

    ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಕುಂದಾಪುರ ಕನ್ನಡ ಹಬ್ಬ-2024’ರ ಮೊದಲ ದಿನವಾದ ಶನಿವಾರ ‘ಊರ ಗೌರವ’ ಸನ್ಮಾನ ಸ್ವೀಕರಿಸಿ ರಿಷಬ್ ಶೆಟ್ಟಿ ಮಾತನಾಡಿದರು.

    ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ, ನಾನು ಬೆಳೆದ ಪರಿಸರವೇ ಪ್ರೇರಣೆ. ಅದರಲ್ಲೂ ಓದದೆಯೇ ರಾಮಾಯಣ-ಮಹಾಭಾರತದ ಸಾರ ತಿಳಿಯಲು ಯಕ್ಷಗಾನ ಕಾರಣ. ‘ಕಾಂತಾರ’ ಸಿನಿಮಾ ಚಿತ್ರೀಕರಣ ಕೂಡ ಕುಂದಾಪುರ ಪರಿಸರದಲ್ಲೇ ಆಗಿರುವುದು ಎಂದು ರಿಷಬ್ ಹೇಳಿದರು.

    ನಮ್ಮ ಭಾಷೆ ಸಂಸ್ಕೃತಿ ಮಕ್ಕಳಿಗೆ ಗೊತ್ತಾಗಬೇಕು. ಅದಕ್ಕಾಗಿ ಇಂಥ ಹಬ್ಬಗಳು ಅತ್ಯಗತ್ಯ. ತುಳಸಿ ಕಟ್ಟೆಗಳು ಅಪರೂಪ ಆಗಿರುವ ಈ ಕಾಲದಲ್ಲಿ ಇಲ್ಲಿ ತುಳಸಿ ಕಟ್ಟೆ ಇಟ್ಟು ಉದ್ಘಾಟನೆ ನಡೆಸಿರುವುದು ಉತ್ತಮ ಸಂಗತಿ. ನಾನು‌ ಕೂಡ ನನ್ನ ಪ್ರತಿ ಸಿನಿಮಾದಲ್ಲೂ ಅಕ್ಕಿಮುಡಿ, ನೆಟ್ಟಿ ಮುಂತಾದವನ್ನು ತೋರಿಸುತ್ತಿರುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದರು. ರಿಷಬ್ ಶೆಟ್ಟಿ- ಪ್ರಗತಿ ಶೆಟ್ಟಿ ದಂಪತಿಗೆ ‘ಊರ ಗೌರವ’ದ ಸನ್ಮಾನ ಮಾಡಲಾಯಿತು.

    ಭಾಷೆಯ ಉಳಿವು ಬೆಳವಣಿಗೆ ದೃಷ್ಟಿಯಿಂದ ಈ ಕುಂದಾಪುರ ಕನ್ನಡ ಹಬ್ಬ ಉತ್ತಮ ಪ್ರಯೋಗ. ದಿನನಿತ್ಯದ ಬಳಕೆಯಲ್ಲಿ ಸಾಧ್ಯವಾದಷ್ಟೂ ಅಧಿಕ ಕುಂದಾಪುರ ಕನ್ನಡ ಬಳಕೆ ಆಗಲಿ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.

    Click here

    Click here

    Click here

    Click Here

    Call us

    Call us

    ಸಂಗೀತ ನಿರ್ದೇಶಕ ರವಿ ಬಸ್ರೂರು, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ಡಾ.ದೀಪಕ್ ಶೆಟ್ಟಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ ಮುಂತಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    sixteen − 4 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.