ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಇದರ 51ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಧಾರವಾಡದ ಯು. ಬಿ. ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಯು. ಬಿ. ಶೆಟ್ಟಿ ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂದೇಶ್ ಭಟ್, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಸದಸ್ಯರಾದ ರವೀಂದ್ರ ಪ್ರಭು, ರಂಜನಾ ಶೆಟ್ಟಿ, ಮಂಜು ದೇವಾಡಿಗ ಅರೆಹಾಡಿ, ವಕೀಲರಾದ ರಂಜಿತ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯರಾದ ಗೌರಿ ದೇವಾಡಿಗ, ಪಾಂಡುರಂಗ ಖಾರ್ವಿ, ಶಂಕರ್ ನಾರಾಯಣ ಭಟ್, ವೆಂಕಟರಮಣ ಭಟ್, ಓಂಕಾರ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.