ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ ಹಾಗೂ ಸಿಖ್ಖ್ಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574990 ಅಥವಾ ಸಹಾಯವಾಣಿ ಸಂಖ್ಯೆ : 8277799990 ಮತ್ತು ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.