ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹೇರಂಜಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತೋತ್ಸವ ಅಂಗವಾಗಿ ಅಸ್ಮ ಕಮ್ ಸಂಸ್ಕೃತಂ ಸರಣಿ ಕಾರ್ಯಕ್ರಮ ಶ್ರೀ ಮಹಾಲಿಂಗೇಶ್ವರ ಸಂಸ್ಕೃತ ಪಾಠಶಾಲೆ ಬಹುಳಾಪುರ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಉದಯ್ ಆಚಾರ್ಯ ಅವರು ವಹಿಸಿಕೊಂಡಿರುತ್ತಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರಶಾಂತ್ ಅರೆ ಶಿರೂರು ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಕಂಬದ ಕೋಣೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ದೇವಾಡಿಗ, ಗ್ರಾಮ ಪಂಚಾಯಿತಿ ಸದಸ್ಯೆ ಜಲಜಾಕ್ಷಿ ಗಾಣಿಗ ಎಸ್. ವಿ. ಎಸ್. ಗಂಗೊಳ್ಳಿ ಇಲ್ಲಿಯ ಅಧ್ಯಾಪಕರಾದ ಶ್ರೀಧರ ಗಾಣಿಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿಯಾದ ಅಚ್ಚುತ ಬಿಲ್ಲವ. ದುರ್ಗಾ ಮಿತ್ರ ಮಂಡಳಿ ಕಂಚಿಕಾನ್ ಇದರ ಅಧ್ಯಕ್ಷರಾದ ಸಂದೀಪ್ ದೇವಾಡಿಗ, ಮಹಾಲಿಂಗೇಶ್ವರ ಸಂಸ್ಕೃತ ಪಾಠಶಾಲೆ ಬಹುಳಾಪುರ ಇಲ್ಲಿಯ ಮುಖ್ಯ ಶಿಕ್ಷಕರಾದ ತಿರುಮಲೇಶ್ವರ ಭಟ್ ಇನ್ನಿತರರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಜಯಾನಂದ ಪಟಗಾರ ಎಲ್ಲರನ್ನೂ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳ ನಾಡಿದರು. ಗೌರವ ಶಿಕ್ಷಕಿ ಭಾರತಿ ವಂದನಾರ್ಪಣೆ ಮಾಡಿದರು. ಸಹ ಶಿಕ್ಷಕ ಚಂದ್ರ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಸೌಮ್ಯ, ಅನುಷಾ ಕಾರ್ಯಕ್ರಮದಲ್ಲಿ ಸಹಕರಿಸಿದರು.