Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ರಾಷ್ಟೀಯ ಕ್ರೀಡಾ ದಿನಾಚರಣೆ ಸಂಪನ್ನ
    alvas nudisiri

    ಆಳ್ವಾಸ್‌ನಲ್ಲಿ ರಾಷ್ಟೀಯ ಕ್ರೀಡಾ ದಿನಾಚರಣೆ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಅಂತಾರಾಷ್ಟ್ರೀಯ ಕ್ರೀಡಾ ಭೂಪಟದಲ್ಲಿ ಮೊದಲ ಬಾರಿಗೆ ಭಾರತ ಮಿನುಗುವಂತೆ ಮಾಡಿದ, ಸ್ವಾತಂತ್ರ್ಯ ಪೂರ್ವದಲ್ಲೇ ಭಾರತಕ್ಕೆ ಮೂರು ಒಲಿಂಪಿಕ್ಸ್ ಚಿನ್ನದ ಪದಕವನ್ನು ಗೆದ್ದುಕೊಟ್ಟ ಕ್ರೀಡಾ ಲೋಕದ ದಿಗ್ಗಜ ಮೇಜರ್ ಧ್ಯಾನ್‌ಚಂದ್ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ನುಡಿದರು.

    Click Here

    Call us

    Click Here

    ಅವರು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ, ಗುರುವಾರ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಹಾಗೂ ಆಳ್ವಾಸ್ ಕಾಲೇಜು ಜಂಟಿಯಾಗಿ ರಾಷ್ಟೀಯ ಕ್ರೀಡಾ ದಿನದ ಹಿನ್ನಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

    ದೇಶವೇ ಹೆಮ್ಮೆ ಪಡುವಂಥ ಸಾಧನೆ:
    ತಮ್ಮ ಅದ್ಭುತ ಕ್ರೀಡಾ ಕೌಶಲದ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಮುಖ್ಯ ಉದ್ದೇಶ ಕ್ರೀಡೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವುದಾಗಿದೆ ಎಂದರು.

    ಆಳ್ವಾಸ್‌ನಲ್ಲಿ ಕ್ರೀಡಾಪಟುಗಳಿಗೆ ಪ್ರತೀ ದಿನ ಹಬ್ಬ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ತನ್ನ ಅಸ್ತಿತ್ವ ಹೊಂದುವ ಮೊದಲೇ ಆಳ್ವಾಸ್‌ನಲ್ಲಿ ಏಕಲವ್ಯ ಸ್ಪೋಟ್ಸ್ ಕ್ಲಬ್‌ನ ಮೂಲಕ ಡಾ. ಎಂ. ಮೋಹನ್ ಆಳ್ವರು ಕ್ರೀಡೆಗೆ ಪ್ರೋತ್ಸಾಹ ನೀಡಲು ಪ್ರಾರಂಭಿಸಿದರು. ಈ ಶ್ರೇಷ್ಠಕಾರ್ಯದ ಫಲವಾಗಿ ಇಂದು 11 ಜನ ಒಲಿಂಪಿಕ್ಸ್ ಕ್ರೀಡಾಪಟುಗಳು ಹೊರಹೊಮ್ಮಲು ಸಾಧ್ಯವಾಯಿತು. ಒಬ್ಬ ಕ್ರೀಡಾಪಟುವಿಗೆ ಏಳವೆಯಲ್ಲಿಯೇ ಬೇಕಾದ ಮೂಲಭೂತ ಸೌಕರ್ಯ ಹಾಗೂ ತರಬೇತಿಯನ್ನು ನಮ್ಮಲ್ಲಿ ನೀಡಲಾಗುತ್ತದೆ. ಹೋಬಳಿ ಮಟ್ಟದ ಕ್ರೀಡಾಪಟು ಅಂತರಾಷ್ಟ್ರೀಯ ಕ್ರೀಡಾಪಟುವಾಗಿ ಬೆಳೆಯುವ ಪೂರಕ ವಾತವರಣ ನಮ್ಮಲ್ಲಿದೆ. ಆಳ್ವಾಸ್‌ನಲ್ಲಿ ಕ್ರೀಡಾಪಟುಗಳಿಗೆ ಪ್ರತೀ ದಿನ ಹಬ್ಬವಿದ್ದಂತೆ ಎಂದರು.

    ಕ್ರೀಡಾ ನೀತಿಗಳು ಬದಲಾಗಬೇಕು:
    ಇತ್ತೀಚೆಗೆ ಮುಕ್ತಾಯಗೊಂಡ ಒಲಿಂಪಿಕ್ಸ್‌ನಲ್ಲಿ ಭಾರತದಿಂದ  ಅತ್ಯುತ್ತಮ  ಪ್ರದರ್ಶನ ಮೂಡಿಬರಲಿಲ್ಲ. ನಮ್ಮ ಜನಸಂಖ್ಯೆಗನುಗುಣವಾಗಿ ಹೋಲಿಸಿ ನೋಡಿದರೆ ನಮ್ಮ ಸಾಧನೆ ಗೌಣವಾಗಿ ಕಾಣುತ್ತದೆ. ಯುದ್ಧಪೀಡಿತ ಉಕ್ರೇನ್ ಸಹ ನಮಗಿಂತ ಜಾಸ್ತಿ ಪದಕ ಗೆಲ್ಲುವುದಾದರೆ, ನಾವೂ ಎಲ್ಲಿ ಎಡವಿದ್ದೇವೆ ಎಂಬುದನ್ನು ವಿಮರ್ಶೆಮಾಡುವ ಸಮಯ ಬಂದಿದೆ. ನಮ್ಮ ದೇಶದಲ್ಲಿ ಕ್ರೀಡೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಕ್ರೀಡಾ ನೀತಿ ಜಾರಿಯಲ್ಲಿಲ್ಲ. ಈ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯಾದಾಗ ಮಾತ್ರ  ಪರಿವರ್ತೆನೆ ಸಾಧ್ಯ. ಶಾಲಾ ಕಾಲೇಜು ಹಂತದಲ್ಲಿ ಕ್ರೀಡೆಗೆ ಸಂಪೂರ್ಣ ಸಹಕಾರ ಲಭಿಸಬೇಕು. ಸರಕಾರದ ಜೊತೆಗೆ ಖಾಸಗಿ ಸಂಸ್ಥೆಗಳು ಕ್ರೀಡಾಪಟುಗಳನ್ನು ಪೋಷಿಸುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಚಾರ್ಯ ಡಾ. ಮಧು ಜಿ.  ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕ್ರೀಡಾಕ್ಷೇತ್ರದ ಸಾಧನೆಯ  ಪಕ್ಷಿನೋಟವನ್ನು ನೀಡಿದರು.

    ಕಾರ್ಯಕ್ರಮದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ರೈ, ಆಳ್ವಾಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ತಿಲಕ್ ಶೆಟ್ಟಿ, ಆಳ್ವಾಸ್ ಶಾಲೆಗಳ ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಇದ್ದರು. ಸಂಗಮೇಶ ಕಾರ್ಯಕ್ರಮ ನಿರೂಪಿಸಿ, ಆಳ್ವಾಸ್ ಸಾಂಸ್ಕೃತಿಕ ತಂಡ ಪ್ರಾರ್ಥನೆ ನೇರವೇರಿಸಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    two × 4 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.