ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗದ 40 ಸ್ಪರ್ಧೆಗಳಲ್ಲಿ ಭಾಗವಹಿಸಿ 36 ವಿಭಾಗಗಳಲ್ಲಿಯೂ ಪ್ರಶಸ್ತಿಯನ್ನು ಗಳಿಸಿ ಅತೀ ಹೆಚ್ಚಿನ ಬಹುಮಾನ ಪಡೆದುಕೊಂಡಿದ್ದಾರೆ.

Call us

Click Here

1ರಿಂದ 4ನೇ ತರಗತಿ ವಿಭಾಗದಲ್ಲಿ ಐದು ಪ್ರಥಮ, ಎರಡು ದ್ವಿತೀಯ ಹಾಗೂ ಎರಡು ತೃತೀಯ ಬಹುಮಾನ ಪಡೆದುಕೊಂಡರೆ, 5ರಿಂದ 7ನೇ ತರಗತಿ ವಿಭಾಗದಲ್ಲಿ ಎಂಟು ಪ್ರಥಮ, ಐದು ದ್ವಿತೀಯ ಹಾಗೂ ಒಂದು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. 8ರಿಂದ 12ನೇ ತರಗತಿ ವಿಭಾಗದಲ್ಲಿ ಮೂರು ಪ್ರಥಮ, ಆರು ದ್ವಿತೀಯ ಹಾಗೂ ನಾಲ್ಕು ತೃತೀಯ ಬಹುಮಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.

Leave a Reply