ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ ಪ್ರೌಢ ಶಾಲಾ ಬಾಲಕ –ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ಶಾಲೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಮಣ್ಯ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ. ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಅವರು ಕಾರ್ಯಕ್ರಮ ನಿರೂಪಣೆ ಗೈದರು, ದೈಹಿಕ ಶಿಕ್ಷಣ ಶಿಕ್ಷಕ ನಾಗೇಂದ್ರ ಅವರು ವಂದನಾರ್ಪಣೆ ಗೈದರು.