ಉಡುಪಿ: ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಶಾನಬದ್ಧ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ –ಎಸ್.ಎಸ್.ಪಿ ತಂತ್ರಾಂಶದಲ್ಲಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ:0820-2573596, ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ  ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply