ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್‌ ಮಾನವ ಸರಪಳಿ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15 ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

Call us

Click Here

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಮಾನವಸರಪಳಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಲು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಅವಶ್ಯ. ಸರಕಾರ ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15 ರಂದು ಬೀದರ್‌ನಿಂದ ಚಾಮರಾಜನಗರದ ವರೆಗೆ ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ಇದರ ಭಾಗವಾಗಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಗ್ರಾಮದಿಂದ ಕಾಪು ತಾಲೂಕಿನ ಹೆಜಮಾಡಿ ಗ್ರಾಮದವರೆಗೆ 26 ಗ್ರಾಮ ಪಂಚಾಯತ್‌ನಲ್ಲಿ 100 ಕಿ.ಮೀ. ರವರೆಗೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿ, ಮಾನವ ಸರಪಳಿ ನಿರ್ಮಿಸಲಿದ್ದಾರೆ ಎಂದ ಅವರು, ಜಿಲ್ಲೆಯ ಯುವಜನತೆ ಹಾಗೂ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಭಾಗಿತ್ವದಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಮಾನವ ಸರಪಳಿ ನಿರ್ಮಾಣಕ್ಕೆ ಪ್ರತೀ 100 ಮೀ. ಗೆ ಒಬ್ಬ ಮೇಲ್ವಿಚಾರಕರನ್ನಾಗಿ ನೇಮಿಸಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳು ಇದರ ಉಸ್ತುವಾರಿ ವಹಿಸಬೇಕು. ಮಾನವ ಸರಪಳಿ ಕಾರ್ಯಕ್ರಮದ ನಂತರ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುವುದು ಎಂದ ಅವರು, ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು, ತಂಪು ಪಾನೀಯ, ಸಿಹಿತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

Click here

Click here

Click here

Click Here

Call us

Call us

ಮಾನವ ಸರಪಳಿ ಕಾರ್ಯಕ್ರಮದಲ್ಲಿ ನೋಂದಣಿ ಮಾಡಿಕೊಳ್ಳಲು ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಭಾವಚಿತ್ರವನ್ನು ಒಳಗೊಂಡ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಸಾರ್ವಜನಿಕರು, ಸಂಘಸಂಸ್ಥೆಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ತುರ್ತು ಸೇವೆಗಾಗಿ ಆರೋಗ್ಯ ಇಲಾಖೆ ವತಿಯಿಂದ ವೈದ್ಯರನ್ನು ಒಳಗೊಂಡ ಚಿಕಿತ್ಸೆ ಸೌಲಭ್ಯವಿರುವ ಅಂಬುಲೆನ್ಸ್ ವ್ಯವಸ್ಥೆಯನ್ನು ಅಲ್ಲಲ್ಲಿ ಇಟ್ಟುಕೊಳ್ಳಬೇಕು. ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಬೇಕು. ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಜಿಲ್ಲಾ ಮಟ್ಟದಲ್ಲಿ ವೇದಿಕೆ ಕಾರ್ಯಕ್ರಮವು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಜನಪ್ರತಿನಿಧಿಗಳು ಭಾಗವಹಿಸಲು ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಮ್ಯೂಸಿಕ್ ಬ್ಯಾಂಡ್ಸೆಟ್, ಟ್ಯಾಬ್ಲೋಗಳು, ಸಾಂಸ್ಕೃತಿಕ ಕಲಾತಂಡಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸಲಿದ್ದಾರೆ. ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕರಿಗೆ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವ್ಯಾಪಕ ಪ್ರಚಾರ ನೀಡಿ ಹೆಚ್ಚು ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ತಾಲ್ಲೂಕು ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಿ, ಕಾರ್ಯಕ್ರಮದ ಯಶಸ್ವಿಗೆ ಅಗತ್ಯ ಸಿದ್ಧತೆಗಳ ಕುರಿತು ಚರ್ಚಿಸಿ, ಕಾರ್ಯಕ್ರಮ ಯಶಸ್ವಿ ಆಗುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಿದ್ಧಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.

Leave a Reply