ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್.ಎಸ್.ಪಿ ತಂತ್ರಾಂಶದಲ್ಲಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನಾ ಆಜಾದ್ ಭವನ ಅಲೆವೂರು ರಸ್ತೆ ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಣಿಪಾಲ, ದೂ.ಸಂ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply