ಗಂಗೊಳ್ಳಿ: 38ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಬಾಲ್ಯದಲ್ಲಿ ಪೋಷಕರು ಮಕ್ಕಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಶಿಕ್ಷಣವನ್ನು ನೀಡಿದರೆ ಅದು ಅವರಿಗೆ ಮುಂದಿನ ಭವಿಷ್ಯದಲ್ಲಿ ಸತ್ಪ್ರಜೆಯಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಮನೆಯೇ ಮೊದಲ ಪಾಠ ಶಾಲೆ ಎಂಬಂತೆ ಮನೆಯಲ್ಲಿ ಪೋಷಕರು ಮಕ್ಕಳನ್ನು ಸನ್ಮಾರ್ಗದಲ್ಲಿ ಮುನ್ನಡೆಯಲು ಬೇಕಾಗುವ ಶಿಕ್ಷಣವನ್ನು ಮಾರ್ಗದರ್ಶನವನ್ನು ನೀಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರಗಳು ದೊರೆತರೆ ನಮ್ಮ ಸಂಸ್ಕೃತಿ ಬೆಳೆಯಲು ಸಾಧ್ಯ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ಹೇಳಿದರು.

Call us

Click Here

ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಗಂಗೊಳ್ಳಿಯ ಶ್ರೀ ವಿಜಯ ವಿಠಲ ಮಂಟಪದಲ್ಲಿ ಭಾನುವಾರ ಜರಗಿದ 38ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.

ಭಟ್ಕಳ ಕುಂಟವಾಣಿ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕ ಡಾ. ಸುರೇಶ ಎಂ. ತಾಂಡೇಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಅಧ್ಯಕ್ಷ ಮಂಜುನಾಥ ಶೆಟ್ಟಿ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿದರು. ಶಿಶು ಮಂದಿರದ ಸದಸ್ಯರಾದ ಭಾಸ್ಕರ ಎಚ್. ಜಿ., ಎಂ. ನಾಗೇಂದ್ರ ಪೈ, ಉಷಾ ಪಿ. ಮಡಿವಾಳ, ವಿಜಯಶ್ರೀ ವಿ. ಆಚಾರ್ಯ, ವಸಂತಿ ಎನ್. ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನಾ, ಗಂಗೊಳ್ಳಿ ರೋಟರಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಶಿಶು ಮಂದಿರದ ಮಾಜಿ ಅಧ್ಯಕ್ಷೆ ಸವಿತಾ ಯು. ದೇವಾಡಿಗ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿ. ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು.

Leave a Reply