ಎನ್.ಎಸ್.ಎಸ್. ಯುವಜನೋತ್ಸವ: ಸುಜಯ್ ಶೆಟ್ಟಿಗೆ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆ.27ರಿಂದ 31ರವರೆಗೆ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಸುಜಯ್ ಶೆಟ್ಟಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Call us

Click Here

ವೈಯಕ್ತಿಕವಾಗಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ಸ್ಪರ್ಧೆಯಲ್ಲಿ ಪ್ರಹಸನ ಮತ್ತು ಸಮೂಹಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 21 ವಿಶ್ವವಿದ್ಯಾನಿಲಯಗಳು ಭಾಗವಹಿಸಿದ ಈ ಯುವಜನೋತ್ಸವ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅತೀ ಹೆಚ್ಚು ಸ್ಪರ್ಧೆಗಳಲ್ಲಿ ಗೆಲ್ಲುವ ಮೂಲಕ ಸಮಗ್ರ ಪ್ರಶಸ್ತಿಪಡೆದಿದ್ದಾರೆ.

ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply