ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಮಳೆಯಾಶ್ರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನ ಗುರಿಯನ್ನು ಹೊಂದಿ ಅನುಷ್ಠಾನಗೊಂಡಿರುವ ಕೃಷಿ ಭಾಗ್ಯ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮರುಜಾರಿಗೊಳಿಸಲಾಗಿರುತ್ತದೆ. ಅದೇ ರೀತಿ ಕೃಷಿ ಭಾಗ್ಯ-ಎಸ್.ಡಿ.ಎಂ.ಎಫ್ ಯೋಜನೆಯನ್ನು ಜಿಲ್ಲೆಯ ಬರ ಪೀಡಿತ ಬ್ರಹ್ಮಾವರ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿರುತ್ತದೆ.

Call us

Click Here

ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಘಟಕಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ, ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕದಡಿ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply