ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ 

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ: 
ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ  ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಉಡುಪಿ ಜಿಲ್ಲಾ ಎನ್ಎಸ್ಎಸ್‌ ಘಟಕದ ಆಫೀಸರ್ ಡಾ. ಜಯಶಂಕರ ಕಂಗನಾರು ಅಭಿಪ್ರಾಯ ಪಟ್ಟರು.

Call us

Click Here

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. 

ಈ ಸಂದರ್ಭದಲ್ಲಿ ಕಳೆದ  ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸನ್ನಿಧಿ ಹೊಳ್ಳ ಮತ್ತು ಪಿ.ಸಿ.ಎಂ.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಅಮೋಘ ದೇವಾಡಿಗ ಅವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ. ವಹಿಸಿದ್ದರು. ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಲಾ ತಾಂಡೇಲಾ ಶುಭಾ ಸಂಸನಗೈದರು. ಎನ್ಎಸ್ಎಸ್‌ ಯೋಜನಾಧಿಕಾರಿ ಸುಗುಣ ಆರ್.ಕೆ, ಎನ್ಎಸ್ಎಸ್‌ ವಿದ್ಯಾರ್ಥಿ ನಾಯಕ ಪ್ರೀತಮ್ ನಾಯಕ್ ಉಪಸ್ಥಿತರಿದ್ದರು. 

ಸಹನಾ ಖಾರ್ವಿ ಸ್ವಾಗತಿಸಿದರು . ಉಪನ್ಯಾಸಕ ವೆಂಕಟೇಶಮೂರ್ತಿ ಎನ್.ಸಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಕ್ಷಿತ ವರದಿ ವಾಚಿಸಿದರು. ಧನ್ಯ ಯು. ಅತಿಥಿಗಳನ್ನು ಪರಿಚಯಿಸಿದರು. ಭಾರತಿ ಖಾರ್ವಿ ನಿರೂಪಿಸಿ, ಶ್ರೇಷ್ಠ ಮೇಸ್ತ ವಂದಿಸಿದರು.

Click here

Click here

Click here

Click Here

Call us

Call us

Leave a Reply